ತುಮಕೂರು
ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಹಚ್ಚುವಿಕೆ (ಉಚಿತ) ಹೆಚ್ಚು ಪರಿಣಾಮಕಾರಿಯಾಗಿಸವು ತಮ್ಮ ಅಧ್ಯಕ್ಷತೆಯಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಸಬೇಕು ಎಂದು ಅಶ್ವಿನಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಒಕ್ಕಲಿಗರ ಒಕ್ಕೂಟ ಹಾಗೂ ವಿಜಯ ಆಸ್ಪತ್ರೆ ವತಿಯಿಂದ ಡಾ. ಟಿ.ಎಸ್. ವಿಜಯಕುಮಾರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಅವರನ್ನು ಭೇಟಿ ಮಾಡಿದ ಡಾ. ವಿಜಯಕುಮಾರ್ ಅವರು, ಈಗಾಗಲೇ ೩೦ ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಸ್ತನದ ಕ್ಯಾನ್ಸರ್, ಮಾಮ್ಮೊಗ್ರಫಿ, ಗರ್ಭಕೋಶದ ಕಂಠದ ಕ್ಯಾನ್ಸರ್, ಪ್ಯಾಪ್‌ಸ್ಮಿಯರ್, ಅಲ್ಟಾçಸೌಂಡ್ ಸ್ಕಾ÷್ಯನ್ ಪರೀಕ್ಷೆಗಳನ್ನು ಕಳೆದ ನವೆಂಬರ್ ತಿಂಗಳಿನಿAದ ಉಚಿತವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಸಾವಿರಾರು ಮಹಿಳೆಯರು ಇದರ ಪ್ರಯೋಜನೆ ಪಡೆದಿದ್ದಾರೆ. ಈ ಕಾರ್ಯಕ್ರಮ ೧೪ ತಿಂಗಳ ವರೆಗೆ ಮುಂದುವರೆಸಿಕೊAಡು ಹೋಗಲು ತಮ್ಮ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.
ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆ ಹಚ್ಚುವಿಕೆ ಮತ್ತಷ್ಟು ಪರಿಣಾಮಕಾರಿಯಾಗಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಪ್ರಮುಖವಾಗಿದೆ. ಹಾಗಾಗಿ ತುಮಕೂರಿನಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಸಲು ಅನುಮತಿ ನೀಡಬೇಕು ಹಾಗೂ ತಮ್ಮ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಿದರೆ ಲಕ್ಷಾಂತರ ಜನಕ್ಕೆ ಇದರ ಮಾಹಿತಿ ರವಾನೆಯಾಗುತ್ತದೆ. ಹಾಗಾಗಿ ಈ ಕಾರ್ಯಕ್ರಮ ಸಹಕಾರ ನೀಡಬೇಕು ಎಂದು ಅವರು ಸಚಿವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಕೋರಿದ್ದಾರೆ. ಈ ಸಂದರ್ಭದಲ್ಲಿ ಚಿಕ್ಕಸ್ವಾಮಿ, ಅಬ್ದುಲ್, ಮನ್ಸೂರ್ ಅಹಮದ್ ಮತ್ತಿತರರು ಭಾಗವಹಿಸಿದ್ದರು.