ತುಮಕೂರು
ತುಮಕೂರು ಮೂಲಕ ಹಾದುಹೋಗುವ ಬೆಂಗಳೂರು-ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಕಳೆದ ಒಂದು ವರ್ಷದಲ್ಲಿ ೭೫೦ಕ್ಕೂ ಹೆಚ್ಚು ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ರಸ್ತೆ ವೀಕ್ಷಿಸಿದರು.
ತುಮಕೂರು ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳಿರುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಗೆ ಭೇಟಿ ನೀಡಿರುವ ಅವರು, ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ದಂಡ ವಸೂಲಿಯೇ ಪ್ರಮುಖ ಕರ್ತವ್ಯವಾಗದೆ ಅಪಘಾತ ಪ್ರಕರಣಗಳನ್ನು ಕಡಿಮೆಯಾಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಪೊಲೀಸ್ ಅಧೀಕ್ಷಕ ರಾಹುಲ್‌ಕುಮಾರ್ ಷಹಪುರವಾಡ್ ಇದ್ದರು.
(Visited 1 times, 1 visits today)