ಚಿಕ್ಕನಾಯಕನಹಳ್ಳಿ


ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಗೆ ಸರ್ಕಾರದಿಂದ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಜಲ ಜೀವನ್ ಮಿಷನ್ ( ಜೆಜೆಎಂ) ಮತ್ತು ಸ್ವಚ್ಛ ಭಾರತ್ ಮಿಷನ್ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾನ್ಯ ಶಾಸಕರಾದ ಸುರೇಶ್ ಬಾಬು ಅವರು ಸೂಚಿಸಿದರು.
ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರದಂದು (೦೩-೦೮-೨೦೨೩) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ , ತುಮಕೂರು ವಿಭಾಗ, ಜಲ ಜೀವನ್ ಮಿಷನ್ (ಜೆಜೆಎಂ) ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆಯಾದ “ಸ್ನೇಹ ಜೀವನ ಫೌಂಡೇಷನ್ (ರಿ) ಸಹಯೋಗದೊಂದಿಗೆ “ ನೀರು ಮತ್ತು ನೈರ್ಮಲ್ಯ ಕುರಿತು ಕಾರ್ಯಗಾರ”ರ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ಯೋಜನೆ ಅಂಶಗಳ ಅನುಗುಣವಾಗಿ ಸಂಬAಧಿಸಿದ ಅಧ್ಯಕ್ಷರು ಹಾಗೂ ಪಂಚಾಯತಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು. ತಾಲ್ಲೂಕು ಪಂಚಾಯತ್ , ಕಾರ್ಯನಿರ್ವಾಹಕ ಅಧಿಕಾರಿಗಳಾದ ವಸಂತ್ ಕುಮಾರ್ ಅವರು ಮಾತನಾಡಿ, ಜಲಜೀವನ್ ಮಿಷನ್ ಎಂಬುದು ಮಹತ್ವಾಕಾಂಕ್ಷೆ ಹೊಂದಿರುವ ಯೋಜನೆಯಾಗಿದೆ. ಮೊದಲ ಹಂತದಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮೂಲಕ ಮಹತ್ವದ ಕಾರ್ಯವನ್ನು ಮಾಡಲಾಗಿದೆ. ಎರಡನೇ ಹಂತದಲ್ಲಿ ಇನ್ನುಳಿದ ಪಂಚಾಯಿತಿಗಳಿAದ ೨೧೮ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜೆಜೆಎಂ ಯೋಜನೆಯ ಅಂಶಗಳನ್ನು ಪ್ರಮುಖವಾಗಿ ಅಧ್ಯಕ್ಷರು ಪಂಚಾಯಿತಿ ಅಧಿಕಾರಿಗಳಿಗೆ ಮನವರಿಕೆ ಆಗಬೇಕು. ಮುಂದಿನ ವರ್ಷಗಳಲ್ಲಿ ಸುಧೀರ್ಘವಾಗಿ ಹೇಗೆ ಕೊಂಡೊಯ್ಯಬೇಕು ಎಂಬುದನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಮೂರ್ತಿ ಅವರು ಮಾತನಾಡಿ, ನಮ್ಮ ಸ್ನೇಹ ಜೀವನ ಸಂಸ್ಥೆಯ ಪರವಾಗಿ ಉತ್ತಮ ರೀತಿಯ ಕಾಮಗಾರಿಗಳನ್ನು ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅರುಣ್ ಕುಮಾರ್ (ಜಿಲ್ಲಾ ಯೋಜನಾ ವ್ಯವಸ್ಥಾಪಕರು), ಉಮಾ ಮಹೇಶ್ ( ಸಹಾಯಕ ಕಾರ್ಯಪಾಲಕ ಇಂಜಿನಿಯರ್), ತಾಲ್ಲೂಕಿನ ಎಲ್ಲಾ ಪಂಚಾಯಿತಿಯ ಅಧ್ಯಕ್ಷರು,ಅಭಿವೃದ್ಧಿ ಅಧಿಕಾರಿಗಳು, ಜೆಜೆಎಂ ಜೂನಿಯರ್ ಇಂಜಿನಿಯರಿAಗ್ ಗಳು, ಸ್ನೇಹ ಜೀವನ ಫೌಂಡೇಶನ್ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿಗಳು, ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.

(Visited 1 times, 1 visits today)