ತುಮಕೂರು
ವಿಶ್ವವಿದ್ಯಾನಿಲಯದ ೧೬ನೇ ವಾರ್ಷಿಕ ಘಟಿಕೋತ್ಸವವು ಆ.೭ ರಂದು ಸೋಮವಾರ ಬೆಳಗ್ಗೆ ೧೧-೦೦ ಗಂಟೆಗೆ ವಿಶ್ವವಿದ್ಯಾನಿಲಯದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಜರುಗಲಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ೧೬ನೇ ವಾರ್ಷಿಕ ಘಟಿಕೋತ್ಸವದ ಕುರಿತಂತೆ ನಡೆದ ಶನಿವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಅವರು ತಿಳಿಸಿದರು.
ಕರ್ನಾಟಕದ ರಾಜ್ಯಪಾಲರೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಉನ್ನತ ಶಿಕ್ಷಣ ಸಚಿವರೂ ತುಮಕೂರು ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳೂ ಆಗಿರುವ ಡಾ. ಎಂ. ಸಿ. ಸುಧಾಕರ್ ಉಪಸ್ಥಿತರಿರುವರು. ಪ್ರೊ. ಸಾಂತಿಶ್ರೀ ಧೂಳಿಪುಡಿ ಪಂಡಿತ್, ಮಾನ್ಯ ಕುಲಪತಿಗಳು, ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ, ನವದೆಹಲಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ನೆರವೇರಿಸಲಿರುವರು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವರಾದ ನಾಹಿದಾ ಜಮ್ ಜಮ್ ಉಪಸ್ಥಿತರಿರುವರು ಎಂದರು.
ಸಮಾಜ ಸೇವಕ ಶ್ರೀ ಆರ್. ಎಲ್. ರಮೇಶ್ ಬಾಬು ಹಾಗೂ ಚಿತ್ರನಿರ್ದೇಶಕ ಶ್ರೀ ಟಿ. ಎಸ್. ನಾಗಭರಣ ಅವರಿಗೆ ಈ ಘಟಿಕೋತ್ಸವದ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಈ ಬಾರಿಯ ಘಟಿಕೋತ್ಸವದಲ್ಲಿ ೫ ಅಭ್ಯರ್ಥಿಗಳು ಡಿ.ಲಿಟ್ ಪದವಿ, ೭೮ ಅಭ್ಯರ್ಥಿಗಳು ಪಿಎಚ್.ಡಿ. ಪದವಿ, ೧೫೧೭ ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ ೮೭೫೬ ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು ೧೦೨೭೩ ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕುಗಳನ್ನು, ಬಿಎ/ಬಿಎಸ್‌ಡಬ್ಲೂö್ಯ/ಬಿಎಸ್‌ಸಿ/ಬಿಕಾಂ/ಬಿಬಿಎA/ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ‍್ಯಾಂಕುಗಳನ್ನು, ಬಿಎಫ್‌ಎ, ಬಿವಿಎ ಹಾಗೂ ಬಿಎ ಇಂಟಗ್ರೇಟೆಡ್ ಕನ್ನಡ ಪಂಡಿತ್‌ಗೆ ತಲಾ ಒಂದು ರ‍್ಯಾಂಕುಗಳನ್ನು ಘೋಷಿಸಿದೆ. ಒಟ್ಟು ೮೦ ವಿದ್ಯಾರ್ಥಿಗಳಿಗೆ ೯೯ ಚಿನ್ನದ ಪದಕಗಳನ್ನು ಹಾಗೂ ಹತ್ತು ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ ಎಂದು ಗೋಷ್ಟಿಯಲ್ಲಿ ತಿಳಿಸಿದರು.