ತುಮಕೂರು
ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ ೧೫ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಅಂದು ರಾಜ್ಯ ಮಟ್ಟದಲ್ಲಿ ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದಲು ನೋಂದಣಿ ಮಾಡಿಸುವ ಗುರಿ ನಿಗದಿಪಡಿಸಿದ್ದು, ಸಕಾಲದಲ್ಲಿ ನೋಂದಣಿ ಕಾರ್ಯ ಸಂಪೂರ್ಣಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಸೇರದಂತೆ ವಿವಿಧ ಸಂಸ್ಥೆ ಹಾಗೂ ಸಾರ್ವಜನಿಕರು ಆನ್‌ಲೈನ್ ಮೂಲಕ ಪಾಲ್ಗೊಳ್ಳಲಿದ್ದು, ಅಂದು ಎಲ್ಲಾ ಸರ್ಕಾರಿ ಕಛೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ hಣಣಠಿ://ಣheಠಿಡಿeಚಿmbಟe-sತಿಜಞಚಿಡಿ.iಟಿ ವೆಬ್‌ಸೈಟ್ ಮೂಲಕ ನೋಂದಾಯಿಸಿಕೊAಡು ಪ್ರಜಾಪ್ರಭುತ್ವದ ಅಧಿಕೃತ ಆಚರಣೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಕೂಡಿರುವ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಸೇರಿದಂತೆ ಒಟ್ಟು ೬೦೦೦ ಫಲಾನುಭವಿಗಳಿಗೆ ಕೆಎಂಎಫ್ ವತಿಯಿಂದ ೩ ತಿಂಗಳು ಬಳಕೆ ಮಾಡುವಷ್ಟು ಪೌಷ್ಟಿಕ ಆಹಾರದ ಕಿಟ್ ಅನ್ನು ನೀಡಲಾಗುವುದು. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಅನುಷ್ಟಾನ ಮಾಡಲಾಗುವುದು. ಯಶಸ್ವಿಯಾದ ನಂತರ ರಾಜ್ಯಕ್ಕೆ ಅನ್ವಯವಾಗುವಂತೆ ಅನುಷ್ಟಾನ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಉಪಸ್ಥಿತರಿದ್ದರು.