ತುಮಕೂರು
ಗಾಂಧೀಜಯAತಿ ಪ್ರಯುಕ್ತ ಅಕ್ಟೋಬರ್ ೨ರವರೆಗೆ ನಗರದಾದ್ಯಂತ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದರು.
ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ಸಂಜೆ ವಿವಿಧ ಇಲಾಖಾಧಿಕಾರಿಗಳೊಂದಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ, ಶ್ರಮದಾನ, ಪ್ರಮುಖ ರಸ್ತೆಯ ಗೋಡೆ ಹಾಗೂ ಶೌಚಾಲಯಗಳಿಗೆ ಬಣ್ಣ ಬಳಿಯುವ, ಸೈಕ್ಲೊಥಾನ್, ಸಸಿ ನೆಡುವ, ಗೋಡೆ ಬರಹ, ತ್ಯಾಜ್ಯ ನಿರ್ವಹಣೆ ಕುರಿತು ಅರಿವು, ಶಾಲೆ-ಕಾಲೇಜುಗಳಲ್ಲಿ ಸ್ವಚ್ಛತಾ ಅರಿವು, ಪೌರಕಾರ್ಮಿಕರಿಗೆ ಸನ್ಮಾನ, ಬೀದಿ ನಾಟಕ, ಫ್ಯಾಷನ್ ಷೋ, ನೃತ್ಯ ಸೇರಿದಂತೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರಲ್ಲದೆ, ಸ್ವಚ್ಛತಾ ಅರಿವು ಕಾರ್ಯಕ್ರಮಗಳಲ್ಲಿ ವಿವಿಧ ಇಲಾಖೆಗಳ ಪಾತ್ರದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಪ್ರಯುಕ್ತ ರೈಲು ನಿಲ್ದಾಣ, ಬಸ್ ನಿಲ್ದಾಣ, ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗುವುದು. ಮೊಬೈಲ್, ಕಂಪ್ಯೂಟರ್, ಟಿವಿ, ಎಸಿ, ವೈರ್ ಸೇರಿದಂತೆ ಎಲೆಕ್ಟಾçನಿಕ್
ಉಪಕರಣಗಳಿಂದ ಉತ್ಪತ್ತಿಯಾಗುವ ಇ-ವೇಸ್ಟ್ ನಿರ್ವಹಣೆ ಮಾಡುವ ಬಗ್ಗೆ ತರಬೇತಿ ನೀಡಲಾಗುವುದು. ಪೌರಕಾರ್ಮಿಕರಿಗೆ ಆರೋಗ್ಯ ಶಿಬಿರ, ಸ್ವಚ್ಛತೆ ಕಾಪಾಡಿಕೊಂಡಿರುವ ಶಾಲೆಗಳಿಗೆ ಸ್ವಚ್ಛತಾ ಪ್ರಶಸ್ತಿ ನೀಡುವುದು, ಸಾರ್ವಜನಿಕ ಶೌಚಾಲಯಗಳಲ್ಲಿ ಸ್ವಚ್ಛತೆ, ಪೌರಕಾರ್ಮಿಕರಿಗೆ ಸಮಾಜ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಯೋಜನಾ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡುವುದು, ಕಸ ವಿಂಗಡಣೆ ಬಗ್ಗೆ ಜಾಗೃತಿ ಮೂಡಿಸಲು ಮನೆ-ಮನೆಗೆ ಭೇಟಿ, ಹೋಟೆಲ್, ವಸತಿ ನಿಲಯ ಹಾಗೂ ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಮಾಡುವ ಬಗ್ಗೆ ಅರಿವು ಮೂಡಿಸಲಾಗುವುದು.
ಪಾಲಿಕೆಯು ಅರಣ್ಯ, ಸಾರಿಗೆ, ಕೃಷಿ, ತೋಟಗಾರಿಕೆ, ಯುವಜನಸೇವಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಾರ್ತಾ, ಸಮಾಜ ಕಲ್ಯಾಣ, ರೈಲ್ವೆ, ಪೊಲೀಸ್, ಕೌಶಲ್ಯಾಭಿವೃದ್ಧಿ, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದಾದ್ಯಂತ ಹಮ್ಮಿಕೊಂಡಿರುವ ಸ್ವಚ್ಛತೆಯೇ ಸೇವಾ (ಸ್ವಚ್ಛತಾ ಹೀ ಸೇವಾ) ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಹಕರಿಸುವ ಮೂಲಕ ನಗರವನ್ನು ಸ್ವಚ್ಛತಾ ನಗರವನ್ನಾಗಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಮೇಯರ್ ಪ್ರಭಾವತಿ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾ ಬಿ.ಜಿ. ವಿರೋಧ ಪಕ್ಷದ ನಾಯಕ ವಿಷ್ಣುವರ್ಧನ ಅವರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಪಾಲಿಕೆಯ ಪರಿಸರ ಇಂಜಿನಿಯರ್ ಪೂರ್ಣಿಮಾ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಸೇರಿದಂತೆ ವಿವಿಧ ಇಲಾಖಾ ಮುಖ್ಯಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.