ತುಮಕೂರು


ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಹೇಮಾವತಿ ನಾಲಾ, ಎತ್ತಿನಹೊಳೆ, ಕೆಐಎಡಿಬಿ, ರಾಷ್ಟಿçÃಯ ಹೆದ್ದಾರಿ-೨೦೬, ತುಮಕೂರು-ದಾವಣಗೆರೆ ರೈಲ್ವೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಸಂಬAಧಿಸಿದAತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಾಮಗಾರಿಗಳಿಗೆ ವೇಗ ನೀಡಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಂಜೆ ವಿವಿಧ ಯೋಜನೆಗಳಿಗೆ ಸಂಬAಧಿಸಿದ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹೇಮಾವತಿ ಹಾಗೂ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂ ಮಾಲೀಕರಿಗೆ ಅವಾರ್ಡ್ ಆದ ಪರಿಹಾರ ಹಣವನ್ನು ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ನೀಡಬೇಕು ಎಂದರಲ್ಲದೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಯೋಜನೆಗಳು ನಿಗಧಿತ ಅವಧಿಯೊಳಗೆ ಪೂರ್ಣಗೊಳ್ಳದಂತಾಗಿದೆ. ಯೋಜನೆಗಳು ಜಾರಿಯಾಗಿ ಹಲವಾರು ವರ್ಷ ಕಳೆದರೂ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲು ಕಾರಣವೇನೆಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅನುದಾನ ಕೊರತೆ, ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಹಿನ್ನಡೆಯಾಗಿದ್ದು, ಕಾಮಗಾರಿಗಳಿಗೆ ವೇಗ ನೀಡಲು ಅಗತ್ಯ ಕ್ರಮವಹಿಸಲಾಗುವುದೆಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ಹೇಮಾವತಿ ನಾಲಾ ವಲಯದ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ ಮಾತನಾಡಿ, ಹೇಮಾವತಿ ನಾಲಾ ಯೋಜನೆಯಡಿ ಗುಬ್ಬಿ ತಾಲ್ಲೂಕಿನ ಬಿಕ್ಕೆಗುಡ್ಡ ಕುಡಿಯುವ ನೀರಿನ ಮೊದಲ ಹಂತದ ಕಾಮಗಾರಿಗಾಗಿ ೨೧.೧೪ ಎಕರೆ ಭೂಸ್ವಾಧೀನಪಡಿಸಿಕೊಳ್ಳಲಾಗಿದ್ದು, ೩೮೧ ಖಾತೆದಾರರಿಗೆ ಅವಾರ್ಡ್ ಅನುಮೋದನೆಯಾಗಿ ಭೂ ಪರಿಹಾರ ಪಾವತಿಸಲಾಗುತ್ತಿದೆ. ಈ ಪೈಕಿ ೨೭೮ ರೈತರ ಖಾತೆಗೆ ೯.೯೪ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ಉಳಿದಂತೆ ೨.೯೪ ಕೋಟಿ ರೂ. ಪಾವತಿಯಾಗಬೇಕಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಪಾವತಿಗೆ ಕ್ರಮಕೈಗೊಳ್ಳಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು.
ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯ ಪ್ರಗತಿ ಮಾಹಿತಿ ನೀಡಿದ ವಿಶೇಷ ಭೂಸ್ವಾಧೀನಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಒಟ್ಟು ೨೦೫.೭೭ ಕಿ.ಮೀ. ಅಂತರವಿರುವ ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯು ತುಮಕೂರಿನಿಂದ ನಾಗಲಾಪುರದವರೆಗಿನ ೧೦೨.೬೦ ಕಿ.ಮೀ. ಅಂತರ ರಾಜ್ಯದ ವ್ಯಾಪ್ತಿಗೊಳಪಡಲಿದ್ದು, ಈ ರೈಲು ಮಾರ್ಗ ನಿರ್ಮಾಣಕ್ಕೆ ೧೩೯೪.೦೧ ಎಕರೆ ಪ್ರದೇಶವನ್ನು ಭೂಸ್ವಾಧೀನಪಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ತುಮಕೂರು, ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ಸೇರಿ ೭೭ ಗ್ರಾಮಗಳು ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೊಳಪಟ್ಟಿದ್ದು, ಈವರೆಗೂ ೧೨೮೯.೧೦ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ದಿಬ್ಬೂರು, ಮರಳೇನಹಳ್ಳಿ, ವೀರಸಾಗರ, ಕುಚ್ಚಂಗಿ, ಹೊನ್ನೇನಹಳ್ಳಿಯಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಈಗಾಗಲೇ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.
ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯಡಿ ತುಮಕೂರು ಹಾಗೂ ಶಿರಾ ತಾಲ್ಲೂಕಿನ ೬೬೮.೨೫ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವಾರ್ಡ್ ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಉಳಿದಂತೆ ೧೮೩.೧೯ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ತುಮಕೂರು-ಶಿವಮೊಗ್ಗ ರಾಷ್ಟಿçÃಯ ಹೆದ್ದಾರಿ ೨೦೬ ರಸ್ತೆ ಅಗಲೀಕರಣ ಯೋಜನೆಯ ಭೂಸ್ವಾಧೀನಕ್ಕಾಗಿ ೮೦೧.೫೧ ಕೋಟಿ ರೂ.ಗಳ ಅನುದಾನವನ್ನು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ದೊರೆತಿದ್ದು, ೭೬೨.೧೮ ಕೋಟಿ ರೂ. ಬಿಡುಗಡೆಯಾಗಿದೆ. ಈವರೆಗೂ ೭೪೭.೩೫ ಕೋಟಿ ರೂ.ಗಳ ಭೂ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಂತರ ಗೃಹ ಸಚಿವ ಜಿ. ಪರಮೇಶ್ವರ ಅವರು ತುಮಕೂರಿನ ವಸಂತ ನರಸಾಪುರದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯಿAದ ಕೈಗೊಂಡಿರುವ ಪ್ರಗತಿ ಮಾಹಿತಿಯನ್ನು ಮಂಡಳಿಯ ಮುಖ್ಯ ಇಂಜಿನಿಯರ್ ವೀರಭದ್ರಯ್ಯ ಅವರಿಂದ ಪಡೆದು ಹೊರ ರಾಜ್ಯಗಳಿಂದ ಕೈಗಾರಿಕೋದ್ಯಮಿಗಳು ತುಮಕೂರಿನತ್ತ ಆಕರ್ಷಿತರಾಗುವಂತೆ ಅಭಿವೃದ್ಧಿ ಪಡಿಸಬೇಕು. ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತೆ ಅಗತ್ಯ ರಸ್ತೆ, ಚರಂಡಿ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಸೌಲಭ್ಯಗಳನ್ನು ಕಲ್ಪಿಸಿದಾಗ ಮಾತ್ರ ಬಹು ರಾಷ್ಟಿçÃಯ ಕಂಪನಿಗಳು ತುಮಕೂರಿನತ್ತ ಬರಲು ಉತ್ಸುಕರಾಗುತ್ತಾರೆ. ಯೋಜನೆ ಕೈಗೊಂಡು ೩ ವರ್ಷಗಳು ಕಳೆದರೂ ಸಮರ್ಪಕವಾಗಿ ಅಭಿವೃದ್ಧಿ ಕಂಡಿಲ್ಲ. ತ್ವರಿತವಾಗಿ ಅಭಿವೃದ್ಧಿಪಡಿಸದಿದ್ದರೆ ಕಂಪನಿಗಳು ಖಾಸಗಿ ಜಮೀನು ಕಂಡುಕೊಳ್ಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಬೇಜವಾಬ್ದಾರಿ ತೋರದೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಷಡಾಕ್ಷರಿ, ಹೆಚ್.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಮತ್ತಿತರರು ಹಾಜರಿದ್ದರು.

(Visited 1 times, 1 visits today)