ಗುಬ್ಬಿ
ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನ ವಿರೋಧಿಸಿ ಗುಬ್ಬಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಸಂಘಟನೆಗಳು ಸಂಪೂರ್ಣವಾಗಿ ಗುಬ್ಬಿಯನ್ನು ಬಂದ್ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಲು ಸಿದ್ಧವಾಗಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಮಾತನಾಡಿ
ಮಂಡ್ಯ, ಮೈಸೂರು, ಹಾಗೂ ಬೆಂಗಳೂರು ಭಾಗಗಳಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಈಗಾಗಲೇ ಪ್ರತಿಭಟನೆ ಹಾಗೂ ಬಂದ್ ಗಳನ್ನ ಮಾಡಲಾಗಿದೆ, ಅದೇ ರೀತಿಯಲ್ಲಿ ರಾಜ್ಯಾದ್ಯಂತ ಫೆಬ್ರವರಿ ೨೯ಕ್ಕೆ ಕರೆದಿರುವ ಕರ್ನಾಟಕ ಬಂದ್ ಗೂ ಸಹ ಎಲ್ಲಾ ಸಂಘಟನೆಗಳು ಸಹಕಾರ ನೀಡುತ್ತಿದ್ದು, ಸಾರ್ವಜನಿಕರು ಸಹ ಇದರಲ್ಲಿ ಭಾಗಿಯಾಗುವ ಮೂಲಕ ನಮ್ಮ ನೀರನ್ನು ನಾವು ಉಳಿಸಿಕೊಳ್ಳುವ ಮೂಲಕ ರಾಜ್ಯವನ್ನ ಉಳಿಸುವಂತಹ ಕೆಲಸ ಮಾಡಬೇಕಾಗಿದೆ.
ತಮಿಳುನಾಡಿಗೆ ಎರಡನೇ ಅವಧಿಗೆ ಬೆಳೆ ಬೆಳೆಯಲು ನೀರು ಬಿಡಲು ಮುಂದಾಗಿದೆ ಇಲ್ಲಿ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆ ಇರುವಾಗ ಅಲ್ಲಿಗೆ ನೀರು ಬಿಡಲು ಅಸಾಧ್ಯ ಎಂದು ಕಿಡಿಕಾರಿದರು.
ತಾಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ ಗುಬ್ಬಿ ತಾಲೂಕಿನ ಅಂಗಡಿ, ಮುಗ್ಗಟ್ಟುಗಳು, ಶಾಲಾ ಕಾಲೇಜುಗಳು, ವ್ಯಾಪಾರ ವಹಿವಾಟನ್ನು ಸಂಪೂರ್ಣವಾಗಿ ಬಂದ್ ಮಾಡಿ ಬೆಳಗ್ಗೆ ೯ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ಯಲ್ಲಿ ಪಾಲ್ಕೊಳ್ಳುತ್ತಿವೆ ಗುಬ್ಬಿಯ ಗೋಸಲ ಚನ್ನಬಸವೇಶ್ವರ ಸ್ವಾಮಿ ಆವರಣದಿಂದ ಕೋರ್ಟ್ ವರೆಗೆ ಮೆರವಣಿಗೆ ಮೂಲಕ ಆಗಮಿಸಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ಮಾಡುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ರೈತ ಬಾಂಧವರು, ವರ್ತಕರು, ಸಾರ್ವಜನಿಕ ಬಂಧುಗಳು ಪ್ರತಿಯೊಬ್ಬರು ಆಗಮಿಸಿ ಬಂದ್ ಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಲೋಕೇಶ್,ರೈತ ಮುಖಂಡರಾದ ಚನ್ನಬಸವಣ್ಣ, ಜಗದೀಶ್, ವಿಜಯ್ ಕುಮಾರ್, ಶಂಕರ್, ಗಂಗಣ್ಣ, ಈಶ್ವರಯ್ಯ, ಸೇರಿದಂತೆ ರೈತ ಸಂಘದ ಎಲ್ಲಾ ಪದಾಧಿಕಾರಿಗಳು ಬೇರೆ ಬೇರೆ ಸಂಘದ ಪದಾಧಿಕಾರಿಗಳು ಭಾಗಿಯಾಗಿದ್ದರು.