ತುಮಕೂರು


ಕುಟುಂಬದಲ್ಲಿ ಹಲವಾರು ಸಮಸ್ಯೆಗಳು ತಲೆದೋರುವುದು ಸಹಜ,ಸಣ್ಣಪುಟ್ಟ ಸಮಸ್ಯೆಗಳು,ಭಿನ್ನಾಭಿಪ್ರಾಯಗಳು ಬರುವುದು ಸಹಜ,ಸತಿ-ಪತಿಗಳು ಅವುಗಳನ್ನೇ ದೊಡ್ಡದು ಮಾಡಿಕೊಂಡು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವುದು ತರವಲ್ಲ,ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲವನ್ನೂ ಮರೆತು ಮುಂದಿನ ಜೀವನ ನಡೆಸಬೇಕು,ಮಕ್ಕಳ ಮುಂದಿನ ಓದು,ಮದುವೆ,ಇತ್ಯಾದಿ ಜವಾಬ್ದಾರಿಗಳು ತಂದೆ-ತಾಯಿಗಳಾದ ನಿಮ್ಮ ಮೇಲಿದೆ ಎಂದು ತುಮಕೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತಕುಮಾರರವರು ಹೇಳಿದರು.
ಅವರು ಇಂದು ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ನಲ್ಲಿ ಪುನರ್ ಒಂದಾದ ಸತಿ-ಪತಿಗಳನ್ನು ಕುರಿತು ಮಾತನಾಡಿದರು.
ವಿವಾಹ ವಿಚ್ಛೇದನಕ್ಕೆ ಸದರಿ ನ್ಯಾಯಾಲಯದಲ್ಲಿ ಹಲವಾರು ಜನ ಅರ್ಜಿ ಸಲ್ಲಿಸಿದ್ದು ಅದರಲ್ಲಿ ಕಳೆದ ಒಂದು ತಿಂಗಳಿನಿAದ ಅರ್ಜಿದಾರರ ಪರ ವಕೀಲರು ಮತ್ತು ಎದುರುರಾರರ ವಕೀಲರು,ಕೌಟುಂಬಿಕ ಜಿಲ್ಲಾ ನ್ಯಾಯಾಧೀಶರು ಎರಡೂ ಕಡೆಯವರಿಗೆ ಬುದ್ಧಿ ಹೇಳಿದ ಪರಿಣಾಮ ಇಂದು ೧೦ ಜೋಡಿಗಳು ಮತ್ತೆ ಹಾರ ಬದಲಾಯಿಸಿಕೊಂಡು, ಪರಸ್ಪರ ಸಿಹಿ ತಿನ್ನಿಸಿ ಮತ್ತೆ ಒಂದಾದ ಘಟನೆಗೆ ಇಲ್ಲಿನ ಜಿಲ್ಲಾ ನ್ಯಾಯಾಧೀಶರು,ವಕೀಲರುಗಳು ಸಾಕ್ಷಿಯಾದರು.
ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಮುನಿರಾಜರವರು ಮಾತನಾಡುತ್ತಾ ದಂಪತಿಗಳು ಚಿಕ್ಕ ಚಿಕ್ಕ ಮಾತುಗಳನ್ನೇ ದೊಡ್ಡದು ಮಾಡಿಕೊಂಡು ಹೋಗಬಾರದು,ಆ ಮಾತುಗಳನ್ನೇ ಮುಂದುವರೆಸಿಕೊAಡು ಹೋದರೆ ಅದು ಎಲ್ಲಿಗೋ ಮುಟ್ಟುತ್ತದೆ,ಜೀವನ ದೊಡ್ಡದು, ಸಮಾಜ,ಕುಟುಂಬ ನಿಮ್ಮ ತಂದೆ-ತಾಯಿಯರು ಬಹಳ ಕಷ್ಟ ಪಟ್ಟು ನಿಮ್ಮ ಮದುವೆಗಳನ್ನು ಮಾಡಿದ್ದಾರೆ ನಿಮ್ಮ ಕುಟುಂಬದ ಮರ್ಯಾದೆ ಸಹ ದೊಡ್ಡದು ಎಂದು ಬುದ್ಧಿವಾದ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸಾರವರು ಮಾತನಾಡುತ್ತಾ ಯಾರೂ ಯಾರ ಜೀವನವನ್ನು ನಡೆಸುವುದಿಲ್ಲ,ಹೇಳಿಕೆ ಮಾತುಗಳನ್ನು ಕೇಳಬೇಡಿ,ನಿಮ್ಮ ಸ್ವಂತ ನಿರ್ಧಾರ ನಿಮ್ಮದು,ಬೇರೆಯವರು ನಿಮ್ಮ ಜೀವನ ನಡೆಸುವುದಿಲ್ಲ,ಉತ್ತಮರ ಮಾತುಗಳನ್ನು ಕೇಳಿ ಹಿರಿಯರಿಗೆ ಮರ್ಯಾದೆ ನೀಡಿ,ಒಟ್ಟು ಕುಟುಂಬವಿದ್ದರೆ ನಮಗೆ ಶಕ್ತಿ,ಈ ಸಮಾಜ ಒಂಟಿ ಮಹಿಳೆಯನ್ನು ಅಥವಾ ವಿಚ್ಛೇದನ ಪಡೆದ ಗಂಡನನ್ನು ನೋಡುವುದೇ ಬೇರೆ ಅದೇ ನೀವು ಒಟ್ಟಾಗಿ ದಂಪತಿಗಳು ಮದುವೆ,ಮುಂಜಿ,ಇತರೆ ಶುಭ ಕಾರ್ಯಕ್ರಮಗಳಿಗೆ ಹೋದಾಗ ನಿಮಗೆ ಸಿಗುವ ಮರ್ಯಾದೆಯೇ ಬೇರೆ,ದಂಪತಿಗಳ ನಡುವೆ ಪರಸ್ಪರ ಪ್ರೀತಿ ವಿಶ್ವಾಸ ನಂಬಿಕೆ ಇರಬೇಕು,ನಿಮ್ಮ ಮುಂದಿನ ಜೀವನ ಹಾಲು-ಜೇನಿನಂತೆ ಸದಾ ಇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಕೀಲರಾದ ಕೆ.ಎಸ್.ಪುಟ್ಟರಾಜು, ಸೀತಕಲ್ ಮಂಜುನಾಥ್, ಗೋವಿಂದರಾಜು, ರವಿ, ಕಾನೂನು ವಿದ್ಯಾರ್ಥಿಗಳು ಹಾಜರಿದ್ದರು.

(Visited 1 times, 1 visits today)