ತುಮಕೂರು
ನಾಯಿಗಳಿಗೆ ರೇಬೀಸ್ ಲಸಿಕೆ ನೀಡುವಿಕೆ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವAತೆ ಜಿಲ್ಲಾ ಪ್ರಾಣಿದಯಾ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಹಿಂದೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿಣಿ ಸಭೆಯ ನಡುವಳಿಯ ರೀತ್ಯ ಕ್ಯೆಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಿದ ಅವರು, ಯಾವುದೇ ಸಭೆಯಲ್ಲಿ ನಿರ್ಣಯಿಸಿದ ನಡವಳಿಗಳನ್ನು ಸಮಗ್ರ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯ ಉಪ ನಿರ್ದೇಶಕ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘ ಸದಸ್ಯ ಕಾರ್ಯದರ್ಶಿ ಡಾ.ಗೀರಿಶ್ ಬಾಬು ರೆಡ್ಡಿ ಮಾತನಾಡಿ, ತುಮಕೂರು ನಗರದಲ್ಲಿ ೨೦೨೦ರ ಪ್ರಾಣಿ ಗಣತಿ ಅನುಸಾರ ಎರಡು ಸಾವಿರ ನಾಯಿಗಳಿದ್ದು, ಪ್ರಸ್ತುತ ಸುಮಾರು ಹತ್ತು ಸಾವಿರ ನಾಯಿಗಳಿವೆ ಎಂದು ಅಂದಾಜಿಸಲಾಗಿದೆ, ಕೋಳಿ ತ್ಯಾಜ್ಯ ಹಾಗೂ ಬೀದಿನಾಯಿಗಳಿಗೆ ನಿಗದಿತ ಸ್ಥಳದಲ್ಲಿ ಅಹಾರ ಹಾಕದೆ, ಎಲ್ಲೇಂದರಲ್ಲಿ ಆಹಾರ ಎಸೆಯುತ್ತಿರುವ ಬಗ್ಗೆ ಮತ್ತು ಬೀದಿ ನಾಯಿಗಳ ಹಾವಳಿ ಬಗ್ಗೆ ದೂರು ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚು ದಾಖಲಾಗುತ್ತಿವೆ ಎಂದರು.
ಹಿರಿಯ ನಾಗರಿಕರು, ಮಕ್ಕಳು, ಅಶಕ್ತರು, ಹಾಗೂ ಸಾರ್ವಜನಿಕರು ಸಂಚಾರ ಮಾಡುವಾಗ ನಾಯಿಗಳಿಂದ ತೊಂದರೆಯಾಗದAತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಪ್ರಮುಖ ಅಸ್ತ್ರವಾಗಿದೆ, ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಪ್ರತೀ ಬೀದಿ ನಾಯಿಗಳಿಗೂ ಮಾಡಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು, ನಗರಸಭೆ, ಗ್ರಾಮ ಪಂಚಾಯತ್ ಹಾಗೂ ಪಶುವೈದ್ಯಾಧಿಕಾರಿಗಳಿಗೆ ಗುರಿಯನ್ನು ನಿಗದಿಪಡಿಸಿ ಸಾಧನೆ ಮಾಡಬೇಕು, ನಾಯಿಗಳಗೆ ರೇಬೀಸ್ ಚುಚ್ಚುಮದ್ದುಗಳನ್ನು ತಪ್ಪದೇ ಹಾಕಿಸಬೇಕು, ಯಾರೂ ಪ್ರಾಣಿಗಳಿಗೆ ಹಿಂಸೆ ನೀಡಬಾರದು, ಸಾಕು ಪ್ರಾಣಿ ಪೋಷಣೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಬೇಕು, ಸರಕಾರಿ ಗೋಶಾಲೆಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು, ಅನಾಥ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಬೀದಿನಾಯಿಗಳಿಗೆ ಕಿರುಕುಳ ಬಗ್ಗೆ ರೇಣುಕಪ್ಪ ಪ್ರಸಾದ್ ಇವರು ಸಲ್ಲಿಸಿರುವ ದೂರು, ಸರ್ಕಾರಿ ಗೋಶಾಲೆಗಳನ್ನು ಸಾರ್ವಜನಿಕ ಸಹಭಾಗಿತ್ವದÀಲ್ಲಿ ನಿರ್ವಹಣೆ ಮಾಡುವ ಕುರಿತು, ಪ್ರಾಣಿ ಕಲ್ಯಾಣ ಸಮಿತಿ ಸ್ಥಾಪನೆ, ೨೦೨೪ನೇ ಅವಧಿಗೆ ಜಿಲ್ಲಾ ಪ್ರಾಣಿದಯಾ ಸಂಘವನ್ನು ನವೀಕರಿಸುವ ಕುರಿತು, ಸರ್ಕಾರಿ ಗೋಶಾಲೆಗೆ ಮೇವು ಖರೀದಿಸುವ ಬಗ್ಗೆ ಹಾಗೂ ಬೀದಿ ನಾಯಿಗಳಲ್ಲಿ ಸಂತಾನಹರಣ ಶಸ್ತçಚಿಕಿತ್ಸೆ ಸೇರಿದಂತೆ ಮೊದಲಾದ ಅಂಶಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾ ಹೆಚ್ಚುವರಿಅಪರ ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯರಾದ ವಿ. ಮರಿಯಪ್ಪ ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ ವಿರೇಶ್ ಕಲ್ಮಠ್, ಸುರಭಿ ಗೋಶಾಲೆಯ ಮಧುಸೂದನರಾವ್, ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪ್ರಾಣಿ ದಯಾ ಸಂಘದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.