ತುಮಕೂರು


ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಹಾಗೂ ಕೃಷಿ ಇಲಾಖೆಯ ಜಾಗೃತಿ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸಿರಾ ತಾಲ್ಲೂಕಿನ ತಾವರೆಕೆರೆ ಬಳಿ ವಾಣಿಜ್ಯ ತೆರಿಗೆ ಇಲಾಖೆ (ಜಾಗೃತಿ)ಯ ಜಂಟಿ ಆಯುಕ್ತ ಟಿ.ಆರ್. ಕೃಷ್ಣಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ರಾಯಚೂರಿ ಜಿಲ್ಲೆಯಿಂದ ಬೇವು ಲೇಪಿತ ಯೂರಿಯಾ ರಸಗೊಬ್ಬರ ತುಂಬಿಕೊAಡು ಬೆಂಗಳೂರು ಮೂಲಕ ಕೇರಳ ರಾಜ್ಯಕ್ಕೆ ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಲಾರಿಯಲ್ಲಿ ದಾಸ್ತಾನಿದ್ದ ಬೇವು ಲೇಪಿತ ಯೂರಿಯಾ ರಸಗೊಬ್ಬರಕ್ಕೂ ಬಿಲ್‌ನಲ್ಲಿ ನಮೂದಿಸಿದ್ದ ಸಾಮಗ್ರಿಗೂ ತುಂಬಾ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಲಾರಿಯಲ್ಲಿ ೭೦೦ ಚೀಲ ಬೇವು ಲೇಪಿತ ಯೂರಿಯಾ ಸಾಗಿಸಲಾಗುತ್ತಿದ್ದು, ಇದರ ಮೌಲ್ಯ ೧೩.೫೫ ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕಾನೂನು ಪ್ರಕಾರ ಕೃಷಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ಕೃಷಿ ಇಲಾಖೆ ಅಧಿಕಾರಿಗಳು ವಾಹನ ಮಾಲೀಕ, ಚಾಲಕ ಹಾಗೂ ಸರಬರಾಜುದಾರರ ವಿರುದ್ಧ ತಾವರೆಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಾಜಿಜ್ಯ ತೆರಿಗೆ ಅಧಿಕಾರಿಗಳಾದ ಗಜೇಂದ್ರಸ್ವಾಮಿ, ನಾಗರಾಜ, ಗಂಗನಗೌಡ, ಕೃಷಿ ಇಲಾಖೆಯ ಜಾರಿ ದಳದ ಅಧಿಕಾರಿಗಳಾದ ಪುಟ್ಟರಂಗಪ್ಪ, ಅಶ್ವತ್ಥ್ನಾರಾಯಣ, ಪಿಎಸ್‌ಐ ಚಂದ್ರಶೇಖರ್, ಎಎಸ್‌ಐ ಮೆಹಬೂಬ್ ಪಾಷ ಭಾಗವಹಿಸಿದ್ದರು.

(Visited 1 times, 1 visits today)