ತುಮಕೂರು
ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದರು.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಂಬAಧ ಶನಿವಾರ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ ಅಪರಾಹ್ನ ನಿಗಧಿಯಾಗಿತ್ತು.
ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ತಲುಪುವ ವೇಳೆಗೆ ಸ್ವಲ್ಪ ವಿಳಂಬವಾಯಿತಾದರೂ ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬAಧಿಸಿದAತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡು ಹಿಡಿಯುವುದು ಸಮಿತಿಯ ಉದ್ದೇಶವಾಗಿತ್ತು. ಆದರೆ ಸಭೆಯಲ್ಲಿ ಅಧಿಕಾರಿಗಳ ಅಲಭ್ಯತೆ ಇರುವುದರಿಂದ ಸಭೆಯನ್ನು ಮುಂದೂಡುವುದಾಗಿ ಸಮಿತಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿ ಸಭೆಯನ್ನು ಮುಂದೂಡಿದರು.
ಮುಂದೊAದು ದಿನ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ಬೆಂಗಳೂರಿನಲ್ಲಿಯೇ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ಡಾ: ಎಂ.ಚAದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ದೇವೇಂದ್ರಪ್ಪ, ಕೃಷ್ಣಾನಾಯ್ಕ, ಹೇಮಲತಾ ನಾಯಕ, ಆರ್.ರಾಜೇಂದ್ರ ರಾಜಣ್ಣ, ಐಹೊಳೆ ದುರ್ಯೋಧನ ಮಹಲಿಂಗಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.