ತುಮಕೂರು: ಎನ್‌ಸಿಸಿ ಯು ವಿದ್ಯಾರ್ಥಿಗಳಿಗೆ ದೇಶ ಸೇವೆಯನ್ನು ಮಾಡಲು ಪ್ರೇರೇಪಿಸುವುದರ ಜೊತೆಗೆ ಜೀವನದಲ್ಲಿ ಶಿಸ್ತನ್ನು ಕಲಿಸುತ್ತದೆ ಎಂದು ಎಸ್ ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ್ ತಿಳಿಸಿದರು.

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಸಭಾಂಗಣದಲ್ಲಿ ಮಂಗಳವಾರದAದು ಎನ್‌ಸಿಸಿ ವಿದ್ಯಾರ್ಥಿಗಳಿಗೆ ಬಿ ಮತ್ತು ಸಿ ಗ್ರೇಡ್‌ನ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್‌ಸಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಿ ಜೀವನಕ್ಕೆ ಉತ್ತಮ ಮೌಲ್ಯಗಳನ್ನು ನೀಡುತ್ತದೆ ಹಾಗೂ ತನ್ನನ್ನು ತಾನು ಸಾಮಾಜಿಕವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ತಿಳಿಸಿದರು.

ಎನ್‌ಸಿಸಿ ಅಧಿಕಾರಿಗಳಾದ ಡಾ. ಜಯಪ್ರಕಾಶ್ ಅವರು ಮಾತ£ ಜೀವನದಲ್ಲಿ ಆತ್ಮ ಸ್ಥೆöÊರ್ಯ, ಕಲಿಕೆಯಲ್ಲಿ ಏಕಾಗ್ರತೆಯನ್ನು ಹೆಚ್ಚಿಸಲು ಹಾಗೂ ವ್ಯಕಿತ್ವ ವಿಕಸನಕ್ಕೂ ಕೂಡ ಎನ್‌ಸಿಸಿ ಸಹಕಾರಿಯಾಗಿದೆ. ದೇಶ ಕಾಯುವ ಯೋಧರಿಗೆ ಇರಬೇಕಾದ ಗುಣವನ್ನು ವಿದ್ಯಾರ್ಥಿಗಳು ಕಲಿಯುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್‌ಸಿಸಿಯ ಬಿ ಮತ್ತು ಸಿ ಗ್ರೇಡ್ ನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಡೀನ್ ಡಾ. ರೇಣುಕಲತಾ.ಎಸ್, ಎನ್‌ಸಿಸಿ ಅಧಿಕಾರಿ ಡಾ. ಜಯಪ್ರಕಾಶ್, ವಿವಿಧ ವಿಭಾಗಗಳ ಮುಖ್ಯಸ್ಥರು, ಎನ್‌ಸಿಸಿ ವಿದ್ಯಾರ್ಥಿಗಳು ಹಾಜರಿದ್ದರು.

(Visited 1 times, 1 visits today)