ತುಮಕೂರು : ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ 2 ಖರೀದಿ ಕೇಂದ್ರ ಹಾಗೂ ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ಹುಳಿಯಾರು, ತಿಪಟೂರು, ತುರುವೇಕೆರೆ, ಗುಬ್ಬಿ ತಾಲೂಕು ಸೇರಿ ಒಟ್ಟು 10 ರಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಇಂದು ಸಂಜೆ ಜರುಗಿದ ಪೂರ್ವಭಾವಿ ¸ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳ ಬೆಂಬಲ ಬೆಲೆಯನ್ನು ನಿಗಧಿಪಡಿಸಲಾಗಿದೆ. ರಾಗಿ ಖರೀದಿ ಪ್ರಕ್ರಿಯೆ ಕಾರ್ಯವನ್ನು 2025ರ ಜನವರಿ 1 ರಿಂದ ಮಾರ್ಚ್ 31ರ ಅವಧಿಯವರೆಗೆ ಕೈಗೊಳ್ಳಬೇಕು ಎಂದು ಹೇಳಿದರು.

ರಾಗಿ ಖರೀದಿಗಾಗಿ ರೈತರ ನೋಂದಣಿ ಪ್ರಕ್ರಿಯೆ ಡಿಸೆಂಬರ್ 1ರಿಂದ ಪ್ರಾರಂಭವಾಗಲಿದ್ದು, ನೋಂದಣಿಗಾಗಿ ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್ ಹಾಜರುಪಡಿಸಬೇಕು ಎಂದು ಸೂಚನೆ ನೀಡಿದರು.

ರಾಗಿ ಖರೀದಿ ಹಂತದಲ್ಲಿ ಎಫ್.ಎ.ಕ್ಯೂ. ಗುಣಮಟ್ಟವನ್ನು ಪರಿಶೀಲಿಸಿ ದೃಢೀಕರಿಸಲು ಪ್ರತಿ ಖರೀದಿ ಕೇಂದ್ರಕ್ಕೆ ತಲಾ ಒಬ್ಬ ಪರೀಕ್ಷಕರನ್ನು ನೇಮಕ ಮಾಡಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಕೃಷಿ, ಆಹಾರ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)