ತುಮಕೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಹಂತದ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ಗುಲಾಬಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ತಂಬಾಕು ದುಷ್ಪರಿಣಾಮಗಳು ಹಾಗೂ ತಂಬಾಕು ಚಟದಿಂದ ಮುಕ್ತಿ ಹೊಂದುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್, ಸ್ಥಾನಿಕ ವೈದ್ಯಾಧಿಕಾರಿ ಡಾ: ಚೇತನ್, ತಾಲೂಕು ಆರೋಗ್ಯ ಅಧಿಕಾರಿ ಡಾ: ಲಕ್ಷ್ಮೀಕಾಂತ್, ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಹೆಚ್. ಬಿ. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ, ಎನ್‌ಸಿಸಿ, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

(Visited 1 times, 1 visits today)