ತುರುವೇಕೆರೆ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ತೊಂದರೆಗಳ ಬಗ್ಗೆ ತಾಲೂಕಿನಾದ್ಯಂತ ಜಾಗೃತಿ ಆಂದೋಲನ ಮಾಡಲಾಗುವುದು ಎಂದು ತಹಸೀಲ್ದಾರ್ ಎ.ಎನ್. ಕುಂಇ ಅಹಮದ್ ತಿಳಿಸಿದರು.

ತಾಲೂಕು ಕಛೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಾದಕ ದ್ರವ್ಯಗಳು ತಾಲೂಕಿನಲ್ಲಿ ಮಾರಾಟವಾಗುತ್ತಿದೆ ಎಂಬ ಸಂಗತಿ ತಿಳಿದು ಬಂದಿದ್ದು. ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಹಲವಾರು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಸಮಾಜಘಾತುಕ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ ಇದನ್ನು ತಪ್ಪಿಸುವ ಸಲುವಾಗಿ ತಾಲೂಕು ಆಡಳಿತ ಮಾದಕ ವಸ್ತುಗಳ ಮುಕ್ತ ತಾಲೂಕನ್ನಾಗಿ ಮಾಡಲು ಪಣ ತೊಟ್ಟಿದೆ ಎಂದು ತಿಳಿಸಿದರು.

ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಉಂಟು ಮಾಡುವುದು. ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಮಾದಕ ವಸ್ತುಗಳನ್ನು ಸೇವಿಸುವವರ ಬಗ್ಗೆಯೂ ಮಾಹಿತಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಅಲ್ಲದೆ ಅವರಿಗೆ ತಾಲೂಕು ಆಡಳಿತದಿಂದ ಗೌಪ್ಯವಾಗೇ ಬಹುಮಾನವನ್ನೂ ಸಹ ನೀಡಲಾಗುವುದು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತ ತಂಡ ರಚಿಸಲಾಗುವುದು. ಮಾರಾಟ ಮಾಡುವವರ ಮತ್ತು ಸೇವನೆ ಮಾಡುವವರ ವಿವರವನ್ನು ಗುಪ್ತವಾಗಿ ಸಂಗ್ರಹಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಕಂಡು ಬಂದಲ್ಲಿ ಅಂತಹವರನ್ನು ಹಿಡಿದು ತಾಲೂಕಿನಿಂದ ಗಡೀಪಾರು ಮಾಡಲು ಜಿಲ್ಲಾಡಳಿತಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ತಾಲೂಕಿನಲ್ಲಿ ಮಾದಕ ವಸ್ತಗಳ ಬಳಕೆ ಮತ್ತು ಮಾರಾಟ ಸಂಬAಧ ಬಗ್ಗೆ ದೂರವಾಣಿ ಸಂಖ್ಯೆ 08139 – 287325 ಗೆ ಅಥವಾ ಮೋಬೈಲ್ 9481772243 ಗೆ ಸಂಪರ್ಕಿಸಲು ಕೋರಲಾಗಿದೆ.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ರಂಗನಾಥ್, ಜಿಲ್ಲಾ ಸಹಾಯಕ ಔಷಧ ನಿಯಂತ್ರಕರಾದ ಬಿ.ಸುರೇಶ್, ಪೋಲಿಸ್ ಇಲಾಖೆ, ತಾಲೂಕು ಪಂಚಾಯತ್‌ನ ಅಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)