ತುಮಕೂರು: ನಗರದ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಹದಾರ್ಢ್ಯ ಪಟು ಶ್ರೀಹರಿ ಮತ್ತು ಹೈಜಂಪ್ ಕ್ರೀಡಾಳು ದರ್ಶನ್ ಹಾಗೂ ರಾಜೋತ್ಸವ ಪ್ರಶಸ್ತಿ ಪಡೆದ ವಿದ್ತಾ÷್ಯವಾಹಿನಿ ಪ್ರದೀಪಕುಮಾರ್ ಅವರನ್ನು ಅಭಿನಂದಿಸಲಾಯಿತು.
ಇತ್ತೀಚೆಗೆ ಥೈಲಾಂಡ್‌ನಲ್ಲಿ ನಡೆದ ವಿಶ್ವ ದೇಹದಾರ್ಢ್ಯ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಕಂಚಿನ ಪದಕ ಪಡೆದ ಶ್ರೀಹರಿ, ರಾಜ್ಯಮಟ್ಟದ ಪಿಯು ಅಥ್ಲೆಟಿಕ್ಸ್ ಕ್ರೀಡಾಕೂಟದ ಹೈಜಂಪ್ ವಿಭಾಗದಲ್ಲಿ 1.91 ಮೀಟರ್ ಎತ್ತರ ಜಿಗಿದು ಚಿನ್ನದ ಪದಕವನ್ಬು ತನ್ನದಾಗಿಸಿಕೊಂಡ ಗ್ರಾಮೀಣ ಪ್ರತಿಭೆ ದರ್ಶನ್ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕöÈತರಾದ ವಿದ್ಯಾನಿಧಿ ಶಿಕ್ಷಣ ಸಂಸ್ಥೆಯ ಪ್ರದೀಪಕುಮಾರ್ ಅವರನ್ನು ಅಂತಾರಾಷ್ಟಿçÃಯ ಕ್ರೀಡಾಪಟು ಟಿ.ಕೆ. ಆನಂದ್ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್, ಹೊಸದುರ್ಗ ತಾಲ್ಲೂಕಿನ ಒಂದು ಕುಗ್ರಾಮದಲ್ಲಿ ಹುಟ್ಟಿ ಸಮರ್ಪಕ ಪರಿಕರಗಳಿಲ್ಲದಿದ್ದರೂ ಹೈಜಂಪ್ ನಂತಹ ಕ್ರೀಡೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ರಾಷ್ಟçಮಟ್ಟದ ಪಾಲ್ಗೊಳ್ಳಲು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಹಾಗೆಯೇ ಶ್ರೀಹರಿ ಕೂಡ ತನ್ನ ಸ್ವಂತ ಪರಿಶ್ರಮದಿಂದ ವಿಶ್ವ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರ ಸಾಧನೆ ಇತರರಿಗೆ ಮಾದರಿ. ಹಾಗೆಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ವಿದ್ಯಾವಾಹಿನಿ ಸಂಸ್ಥೆಯ ಕಾರ್ಯದರ್ಶಿ ಪ್ರದೀಪ ಅವರ ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತ ರಾಜೋತ್ಸವ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಯ ಘನತೆಯನ್ನು ಹೆಚ್ಚಿದೆ ಎಂದರು. ಕನ್ಬಡಸೇನೆಯ ಅಧ್ಯಕ್ಷ ಧನಿಯಕುಮಾರ್ ಮಾತನಾಡಿದರು. ಚೆಸ್ ಅಕಾಡೆಮಿ ರಾಜ್ಯಾಧ್ಯಕ್ಷ ಟಿ.ಎನ್.ಮಧುಕರ್ ಮಾತನಾಡಿ, ಟಿ.ಕೆ. ಆನಂದ್ ಅವರು ಒಂದು ರೀತಿ ಕ್ರೀಡಾ ರಾಯಭಾರಿಯಂತೆ. ಹಿರಿಯ, ಕಿರಿಯ ಕ್ರೀಡಾಪಟುಗಳನ್ನು ಬೆಸೆಯುವ ಕೆಲಸ ಮಾಡುತ್ತಿದ್ದಾರೆ. ಅಥ್ಲೆಟಿಕ್ಸ್ ದೈಹಿಕ ಶ್ರಮದ ಕ್ರೀಡೆಯಾದರೆ, ಚೆಸ್ ಮೈಂಡ್ ಗೇಮ್ ಆಗಿದೆ. ಮಕ್ಕಳು ಚೆಸ್ ಕಡೆ ಗಮನ ಹರಿಸಬೇಕು ಎಂದರು. ದೇಹದಾರ್ಢ್ಯಪಟು ಶ್ರೀಹರಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ರೀಡಾ ತರಬೇತುದಾರರಾದ ಶಿವಪ್ರಸಾದ್, ಮುಖಂಡರಾದ ನಟರಾಜಶೆಟ್ಟಿ, ವೆಂಕಟಾಚಲ, ರಮೇಶ್, ಬಾಲರಾಜ್, ಕೃಷ್ಣಮೂರ್ತಿ ಸೇರಿದಂತೆ ಮುಂಜಾನೆ ಗೆಳೆಯರ ಬಳಗದ ಪದಾಧಿಕಾರಿಗಳು, ಭಾಗವಹಿಸಿದ್ದರು.

(Visited 1 times, 1 visits today)