ತುಮಕೂರು: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಮಟ್ಟದ ಕ್ರೀಡಾಕೂಟದ ಅಂಗವಾಗಿ ಇಂದಿನಿAದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಮೆರವಣಿಗೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ನಗರದಲ್ಲಿಂದು ವಿದ್ಯುಕ್ತ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಿಲ್ಲೆಯಾದ್ಯಂತ ಕ್ರೀಡಾಜ್ಯೋತಿ ಕೊಂಡೊಯ್ಯುವ ವಾಹನಕ್ಕೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿಯನ್ನು ಬೆಳಗುವ ಮೂಲಕ ಚಾಲನೆ ನೀಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಿ, ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ನ. 24 ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಇದರ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಇಡೀ ಜಿಲ್ಲೆಯಲ್ಲಿ ಶಾಂತಿಯ ಸಂದೇಶ ಸಾರುವ ಸಲುವಾಗಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ಕ್ರೀಡಾಜ್ಯೋತಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಂಚರಿಸಿ ಸಮಾಜದಲ್ಲಿ ಶಾಂತಿ, ಸಹೋದರತ್ವ ಭಾವನೆಯಿಂದ ಬಾಳಬೇಕು ಎಂಬ ಸಂದೇಶ ಸಾರಲಿದೆ ಎಂದರು. ಪ್ರತಿಯೊಬ್ಬ ಪತ್ರಕರ್ತರಲ್ಲೂ ಕ್ರೀಡಾ ಮನೋಭಾವನೆ ಮೂಡಬೇಕು. ಈ ನಿಟ್ಟಿನಲ್ಲಿ ಕ್ರೀಡಾಜ್ಯೋತಿ ಮೆರವಣಿಗೆ ನಡೆಯುತ್ತಿದೆ ಎಂದು ಅವರು ಹೇಳಿದರು. ನಾನು ಒಬ್ಬ ಕ್ರೀಡಾಪಟುವಾಗಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡುರುವುದು ತುಂಬಾ ಸಂತೋಷ ತಂದಿದೆ ಎಂದು ಅವರು ತಿಳಿಸಿದರು. ನ. 24 ರಂದು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಡಿಸೆಂಬರ್ 2 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಅಂದು ಈ ಭಾಗದಲ್ಲಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ಸ್ಥಾಪನೆ ಮಾಡುವಂತೆ ಮನವಿ ಮಾಡಲಾಗುವುದು. ಮಧುಗಿರಿ-ಕೊರಟಗೆರೆ ಭಾಗದಲ್ಲಿ ರಾಷ್ಟಿçÃಯ ಹೆದ್ದಾರಿಗೆ ಹೊಂದಿಕೊAಡAತೆ 2-3 ಸಾವಿರ ಎಕರೆ ಜಾಗ ಇದೆ. ಅದನ್ನು ವಿಮಾನ ನಿಲ್ದಾಣ ಸ್ಥಾಪನೆಗೆ ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಕೋರಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಕನ್ನಿಕಾ ಪರಮೇಶ್ವರ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಗೃಹ ಸಚಿವರ ವಿಶೇಷಾಧಿಕಾರಿ ಡಾ. ನಾಗಣ್ಣ, ಕೆಯುಡಬ್ಲೂ÷್ಯಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಕೆಯುಡಬ್ಲೂ÷್ಯಜೆ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ಕ್ರೀಡಾಕೂಟದ ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಟಿ.ಎನ್. ಮಧುಕರ್, ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್ ಸೇರಿದಂತೆ ಪತ್ರಕರ್ತರುಗಳು ಭಾಗವಹಿಸಿದ್ದರು.