ತುಮಕೂರು: ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅತೀಕ್ ಅಹಮದ್ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಭೂತಪೂರ್ವ ವಿಜಯ ಸಾಧಿಸಿದ್ದು, ಇದರೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಅಸಂಬದ್ಧವಾಗಿ ಮಾತನಾಡುತ್ತಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ರಾಜ್ಯದ ಜನರಿಂದ ಉತ್ತಮವಾದ ತೀರ್ಮಾನ ದೊರೆತಿದ್ದು ಗೆಲುವಿನ ಸಾಧಿಸಿದ ಮೂರು ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಾ, ರಾಜ್ಯದ ಜನತೆಗೆ ಕೇವಲ ಸುಳ್ಳನ್ನೇ ಹೇಳುತ್ತಾ, ಸುಳ್ಳನ್ನು ಸತ್ಯವನ್ನಾಗಿಸುವ ಕೆಲಸ ಮಾಡಿದ್ದರು. ಈ ರೀತಿಯ ಸುಳ್ಳು ಪ್ರಚಾರಗಳಿಗೆ ಸೊಪುö್ಪ ಹಾಕದ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವುದರ ಮೂಲಕ ರಾಜ್ಯ ಸರ್ಕಾರಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಾಸಿರ್ ಪಾಷ ಮುಜೀಬ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)