ತುಮಕೂರು: ವೀರಶೈವ, ಲಿಂಗಾಯತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಜಿಲ್ಲೆಯ ಹಿರಿಯರು ಸೇರಿ ಐದು ಎಕರೆ ಜಾಗ ಖರೀದಿಸಿ, ಹಾಸ್ಟೆಲ್ಗಳ ನಿರ್ಮಾಣಕ್ಕೆ ಒತ್ತ್ತುನೀಡಿದರೆ ತಮ್ನ ಕೈಲಾದ ಸೇವೆಯನ್ನು ಮಾಡುವುದಾಗಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ನಗರದ ಗುರುಕುಲ ಹಾಸ್ಟಲ್ ಆವರಣದಲ್ಲಿ ಹೊಸದಾಗಿ ನಿರ್ಮಿಸಿರುವ ಗುರುಕುಲ ಅರ್ಕೇಡ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ತುಮಕೂರು ಬೆಳೆದಂತೆ ಭೂಮಿಯ ಬೆಲೆ ಗಗನಮುಖಿಯಾಗಿದೆ.ಭವಿಷ್ಯದ ದೃಷ್ಟಿಯಿಂದ ನೆರೆಯ ಆಂದ್ರದವರು ಬಂದು, ಈ ಭಾಗಕ್ಕೆ ಬಂದು ಒಂದಕ್ಕೆ ಎರಡು ರೇಟ್ ನೀಡಿ ಭೂಮಿ ಖರೀದಿಸುತ್ತಿದ್ದಾರೆ.ಹಾಗಾಗಿ ಸಮುದಾಯದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ವೀರಶೈವ ಸಮಾಜದ ಮುಖಂಡರು ನಗರದ ಸುತ್ತಮುತ್ತ ಐದು ಎಕರೆ ಜಾಗ ಖರೀದಿಸಿದರೆ,ಅಲ್ಲಿ ಹಾಸ್ಟಲ್ ನಿರ್ಮಿಸಿ ಮತ್ತಷ್ಟು ಮಕ್ಕಳಿಗೆ ಆಶ್ರಯ ನೀಡಬಹುದು ಎಂದರು.
ತುಮಕೂರು ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ಬಸವರಾಜು ಸಂಸದರಾಗಿ ಅವರು ಕೈ ಹಾಕಿದ ಎಲ್ಲಾ ಕಾರ್ಯಕ್ರಮಗಳನ್ನು ಪೂರೈಸುತ್ತೇನೆ. ಈಗಾಗಲೇ ಸಾಕಷ್ಟು ರೈಲುಗಳನ್ಬು ನೀಡಲಾಗಿದೆ.ಬಹುಜನರ ಕೋರಿಕೆಯಂತೆ ತುಮಕೂರು ಮೂಲಕ ಮಂಗಳೂರಿಗೆ ಟ್ರೈನ್ ಬಿಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅವಶ್ಯಕತೆ ಕಂಡುಬAದರೆ ಅದನ್ನು ವ್ಯವಸ್ಥೆ ಮಾಡುತ್ತನೆ.ಈಗಾಗಲೇ ತುಮಕೂರು ಮೂಲಕ ಒಂದೇ ಭಾರತಂ ರೈಲಿನ ಜೊತೆಗೆ,. ಮೇಮೋ ರೈಲುಗಳ ಒಡಾಟಕ್ಕೆ ಅವಕಾಶಗಳನ್ನು ಕಲ್ಪಿಸಲಾಗಿದೆ. ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ.ನೆನೆಗುದ್ದಿಗೆ ಬಿದ್ದ ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳಗೆ ಚಾಲನೆ ದೊರೆತಿದ್ದು, ಮೂರು ವರ್ಷಗಳಲ್ಲಿ ತುಮಕೂರು ಜಿಲ್ಲೆಯ ಚಿತ್ರಣ ಬದಲಾಗಲಿದೆ.ಕೈಗಾರಿಕೆ ಗಳು,ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ದಿಯಾದಂತೆ,ತುಮಕೂರಿನ ಮೇಲೆ ಎಲ್ಲರ ಕಣ್ಣಿದೆ ಎಂದು ಕೇಂದ್ರ ಸಚಿವ ಸೋಮಣ್ಣ ನುಡಿದರು.
ಮಾಜಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿದರು.ವೇದಿಕೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್,ಗುರುಕುಲ ಹಾಸ್ಟಲ್ ಸಮಿತಿ ಅಧ್ಯಕ್ಷರಾದ ಜಿ.ಎನ್.ಬಸವರಾಜು, ಉಪಾಧ್ಯಕ್ಷ ಎಂ.ಆರ್.ಸಿದ್ದಲಿAಗಪ್ಪ, ಮತ್ತಿತರರು ಉಪಸ್ಥಿತರಿದ್ದರು

(Visited 1 times, 1 visits today)