ತುಮಕೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಒಕ್ಕೂಟದ ಮುಖಂಡರು, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಿಂದುಳಿದವರು, ಶೋಷಿತರಿಗೆ ನೆರವಾಗಿವೆ. ಧ್ವನಿ ಇಲ್ಲದ ವರ್ಗದ ಧ್ವನಿಯಾಗಿ ಅರಸು ಅವರು ಹಲವಾರು ಕಾರ್ಯಕ್ರಮಗಳ ಮೂಲಕ ನಾಡಿಗೆ ಕೊಡುಗೆ ನೀಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಜಾರಿಗೆ ತಂದು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಿದ್ದರು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣಕರ್ತರು. ಇವರ ಸೇವೆ ಸದಾ ಸ್ಮರಣೀಯ. ಇಂತಹ ಮಹನೀಯರಿಗೆ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪÀ್ರಶಸ್ತಿ ನೀಡಿ ಅವರ ಸೇವೆಯನ್ನು ಗೌರವಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದರು.ದೇವರಾಜ ಅರಸು ಅವರು ಹುಟ್ಟಿದ ಮನೆಯನ್ನು ದುರಸ್ತಿಗೊಳಿಸಬೇಕು, ಅವರ ಸಮಾಧಿಯನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಒಕ್ಕೂಟದ ಗೌರವಾಧ್ಯಕ್ಷ ಟಿ.ಎನ್.ಮಧುಕರ್, ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಗೌರವ ಸಲಹೆಗಾರರಾದ ವೆಂಕಟಸ್ವಾಮಿ, ಪಿ.ಮೂರ್ತಿ, ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ, ಉಪಾಧ್ಯಕ್ಷ ಡಿ.ಎಂ.ಸತೀಶ್, ಪದಾಧಿಕಾರಿಗಳಾದ ಹರೀಶ್ ಆಚಾರ್ಯ, ಮಂಜೇಶ್ ಒಲಿಂಪಿಕ್, ಗುರುರಾಘವೇಂದ್ರ, ಡಮರುಗೇಶ್, ಶಾಂತಕುಮಾರ್, ತೇಜಸ್, ತೇಜೇಶ್ ಮೊದಲಾದವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಮನವಿ ಮಾಡಿದರು.
(Visited 1 times, 1 visits today)