ತುಮಕೂರು: ಮಾಗಡಿ ತಾಲೂಕುಗಳಿಗೆ ಹೇಮಾವತಿ ನೀರಿ ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಕೇನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು, ಜಿಲ್ಲೆಗೆ ನಿಗಧಿಯಾಗಿರುವ ನೀರನ್ನು ಸಂಪೂರ್ಣವಾಗಿ ಹರಿಸಬೇಕು ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊAಡು ಡಿಸೆಂಬರ್ 07 ಶನಿವಾರ ಸಂಯುಕ್ತ ಕಿಸಾನ್ ಕರ್ನಾಟಕ ನೇತೃತ್ವದಲ್ಲಿ ವಿವಿಧ ರೈತಪರ ಸಂಘಟನೆಗಳು ಕಪ್ಪುಪಟ್ಟಿ ಧರಿಸಿ,ಬೃಹತ್ ಪ್ರತಿಭಟನಾ ಧರಣಿಯನ್ಬು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿವೆ.
ಸುದ್ದಿಗೋಷ್ಟಿ ಯಲ್ಲಿಂದು ಮಾತನಾಡಿದ ಸಂಯುಕ್ತ ಹೋರಾದ ಸಿ.ಯತಿರಾಜು,ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು,ಎಕೆಐಎಸ್Àನ ಎಸ್.ಎನ್.ಸ್ವಾಮಿ, ಪ್ರಾಂತ ರೈತ ಸಂಘದ ಚನ್ನಬಸಣ್ಣ, ಅಜ್ಜಪ್ಪ, ಎಐಕೆಎಸ್ನ ಕಂಬೇಗೌಡ ,ವೆಂಕಟೇಗೌಡ,ಮಹಿಳಾ ವಿಭಾಗದ ಜಯಮ್ಮ ಅವರುಗಳು, ಜಿಲ್ಲೆಯ ಜನಪ್ರತಿನಿಧಿಗಳು, ರೈತರ ಹಿತ ಮರೆತು,ಮತ ರಾಜಕೀಯದ ಮೇಲಾಟ ನಡೆಸುತ್ತಿದ್ದಾರೆ. ಹಾಗಾಗಿ ರೈತ ಸಂಘಟನೆಗಳು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿವೆ ಎಂದರು.
ಸAಯುಕ್ತ ಹೋರಾಟದ ಸಂಚಾಲಕ ಸಿ.ಯತಿರಾಜು,ತುಮಕೂರು ಶಾಖಾ ನಾಲೆಯಿಂದ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಏಕಾಏಕಿ ಆರಂಭಿಸಿ ಜಿಲ್ಲೆಯ ಜನರಲ್ಲಿ, ಮುಖ್ಯವಾಗಿ ರೈತರಿಗೆ ತೀವ್ರವಾದ ಆತಂಕವನ್ನು ಸರಕಾರ ಸೃಷ್ಟಿ ಮಾಡಿದೆ.ತುಮಕೂರು ಜಿಲ್ಲೆಯ ಹೆಚ್ಚು ಕಡಿಮೆ ಎಲ್ಲಾ ತಾಲೂಕುಗಳ ರೈತರು ಮತ್ತು ನಾಗರಿಕರು ಕುಡಿಯುವ ನೀರಿಗೆ ನೀರಾವರಿಗೆ ಹೇಮಾವತಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಹೇಮಾವತಿ ನೀರನ್ನು ನೆಚ್ಚಿಕೊಂಡೇ ಕೃಷಿ ಮತ್ತು ಬದುಕನ್ನು ರೂಪಿಸಿಕೊಂಡಿದ್ದಾರೆ. ಹೇಮಾವತಿಯ ನೀರಿನಿಂದ ಕೆರೆ ತುಂಬಿಸದಿದ್ದರೆ ಅದರ ಮೇಲೆ ಅವಲಂಬಿತವಾದ ತೆಂಗು, ಅಡಿಕೆ ಇನ್ನಿತರ ಬೆಳೆಗಳು ಸರ್ವನಾಶವಾಗುತ್ತವೆ. ಮಾಗಡಿಗೆ ಹೇಮಾವತಿ ನೀರು ಹರಿಸಲು ಯಾರಿಗೂ ಅಭ್ಯಂತರವಿಲ್ಲ. ಅದಕ್ಕಾಗಿ ತುಮಕೂರಿನ ರೈತರೂ ಸಹ ಹೋರಾಟಕ್ಕೆ ಕೈಜೋಡಿಸಲು ಸಿದ್ದ. ಆದರೆ ತುಮಕೂರಿನ ಶಾಖಾ ನಾಲೆಯಿಂದ ನೀರು ತೆಗೆದುಕೊಂಡು ಹೋಗುವುದರ ಬಗ್ಗೆಯಷ್ಟೇ ವಿರೋಧ. ಏಕೆಂದರೆ ನೀರಿನ ಹಂಚಿಕೆಯ ವ್ಯತ್ಯಯವು ತೀವ್ರವಾದ ಕೃಷಿ ಬಿಕ್ಕಟ್ಟನ್ನು ಸೃಷ್ಟಿಸುತ್ತದೆ ಎಂಬ ಆತಂಕವನ್ಬು ವ್ಯಕ್ತಪಡಿಸಿದರು.
ಜಲ ಸಂಪನ್ಮೂಲ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ದಿನಾಂಕ: 11.07.2019 ರಂದು ತುಮಕೂರು ಹೇಮಾವತಿ ನಾಲಾ ವಲಯಕ್ಕೆ 25.31 ಟಿಎಂಸಿ ನೀರನ್ನು ನಿಗದಿಪಡಿಸಿ ಹೊಸದಾಗಿ ಕೆಲವು ಪ್ರದೇಶಗಳನ್ನು ಸೇರಿಸಿದ್ದಾರೆ. ಅದರಂತೆ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದೆ. ಆದರೆ ಇದುವರೆಗೂ ತುಮಕೂರು ನಾಲಾ ವಲಯಕ್ಕೆ ಹಂಚಿಕೆಯಾಗಿರುವ 24.5 ಟಿಎಂಸಿ ನೀರು ದೊರಕಿಲ್ಲ. ಹಾಗಾದರೆ 25.31 ಟಿಎಂಸಿ ನೀರು ಎಲ್ಲಿಂದ ಬರುತ್ತದೆ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.ಆದ್ದರಿಂದ ತುಮಕೂರು ಜಿಲ್ಲೆಗೆ ಬರಬೇಕಾದ ನೀರಿನ ಹಂಚಿಕೆಯನ್ನು ಮೊದಲು ಖಚಿತಪಡಿಸ ಬೇಕು.ಆದಾಗದಿದ್ದರೆ ಲಿಂಕ್ ಕೆನಾಲ್ ನಿಂದ ನಿರ್ಮಾಣದಿಂದಾಗಿ ಜಿಲ್ಲೆಗೆ ಬರುವ ಅಲ್ಪಸ್ವಲ್ಪ ನೀರು ಭಾಗವಾಗಿ ಮಾಗಡಿಗೆ ಹರಿದು ಹೋಗಬಹುದೆಂದು ಆತಂಕವಾಗಿದೆ.ಈ ವಿಚಾರದಲ್ಲಿ ಸರಕಾರ ರೈತ ಮುಖಂಡರೊAದಿಗೆ ಚರ್ಚೆ ನಡೆಸಿ,ರೈತರ ಅನುಮಾನವನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು
ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೊಂವಿAದರಾಜು ಮಾತನಾಡಿ, ಈಗಾಗಲೇ ಶಾಖಾ ನಾಲೆಯಿಂದ ಕುಣಿಗಲ್‌ರೆಗೂ ಹೇಮಾವತಿ ನೀರು ಹೋಗುತ್ತಿದೆ. ಇತ್ತೀಚಿಗೆ ಕೋಟ್ಯಾಂತರ ಹಣವನ್ನು ಮೂಲ ನಾಲೆಯ ಅಗಲೀಕರಣ ಮತ್ತು ನಾಲಾ ಅಭಿವೃದ್ಧಿ ಕೆಲಸ ನಡೆದಿದೆ. ಹಾಗಾಗಿ, ಅಲ್ಲಿಂದಲೇ ಮಾಗಡಿಗೆ ನೀರನ್ನು ತೆಗೆದುಕೊಂಡು ಹೋಗಬಹುದಿತ್ತು. ಅದು ಸುಲಭ ಮತ್ತು ಖರ್ಚೂ ಕಡಿಮೆ. ಆದರೆ ಅದಕ್ಕೆ ಬದಲಿಗೆ ಗುಬ್ಬಿಯಿಂದ ಹೊಸದಾಗಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದೆ. ಇದರಿಂದ ಮತ್ತೆ ಕೋಟ್ಯಾಂತರ ಹಣ ದುಂದುವೆಚ್ಚವಾಗುತ್ತದೆ ಮತ್ತು ರೈತರ ಭೂಮಿ ಸ್ವಾಹ ಆಗುತ್ತದೆ ಎಂದರು. ಎಐಕೆಎಸ್ ನ ಕಂಬೇಗೌಡ ಮಾತನಾಡಿ, ಜನಪ್ರತಿನಿಧಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಮೌನಕ್ಕೆ ಶರಣಾಗಿರುವುದು ದರಂತವೇ ಸರಿ. ಚಳಿಗಾಲದ ಅಧಿವೇಶನಲ್ಲಿ ಈ ಕುರಿತು ಎಲ್ಲಾ ಶಾಸಕರು ಪಕ್ಷ ಭೇಧ ಮರೆತು ಚರ್ಚೆ ನಡೆಸಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಾಂತರೈತ ಸಂಘದ ಬಿ.ಉಮೇಶ್ ಇದ್ದರು.
(Visited 1 times, 1 visits today)