ತುಮಕೂರು: ಚುಮು ಚುಮು ಚಳಿಯಲ್ಲಿ, ಹಗಲು ಅಲ್ಪ ರಾತ್ರಿ ದೀರ್ಘವಾಗಿದ್ದರೂ ಬೆಳಿಗ್ಗೆ ಎದ್ದೇಳಲೂ ಮನಸ್ಸಾಗದಿದ್ದರೂ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆಗೆ ತುಮಕೂರು ಜಿಲ್ಲೆಯ ನಾನಾ ಶಾಲೆಗಳಿಂದ ಮಕ್ಕಳು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನೆರೆದಿದ್ದರು. ನಸುಕಿನಲ್ಲಿ ಮರೆಯಾದ ನಕ್ಷತ್ರಗಳೆಲ್ಲ ಭುವಿಗಿಳಿದು ಎಂಜಿನಿಯರಿAಗ್ ಕಾಲೇಜಿಗೆ ಆವರಣಕ್ಕೆ ನೇರ ಬಂದಿಳಿದವೇನೋ ಎನ್ನುವ ರೀತಿಯಲ್ಲಿ ಮಕ್ಕಳು ಚಿತ್ರ ಬಿಡಿಸಲು ತಯಾರಾಗಿ ಬಂದಿದ್ದು, ಕಣ್ಣಿಗೆ ಹಬ್ಬ ಉಂಟು ಮಾಡಿತ್ತು. ಈ ದೃಶ್ಯ ಕಂಡು ಬಂದಿದ್ದು, ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ. ಶಿಕ್ಷಣ ಭೀಷ್ಮ ದಿವಂಗತ ಡಾ. ಹೆಚ್.ಎಂ. ಗಂಗಾಧರಯ್ಯನವರ ಸ್ಮರಣಾರ್ಥ ತುಮಕೂರು ಜಿಲ್ಲೆಯ ಶಾಲಾ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಫರ್ಧೆ ಕಾರ್ಯಕ್ರಮವನ್ನು ಅಂತಾರಾಷ್ಟೀಯ ಚಿತ್ರಕಲಾವಿದರಾದ ಸೂರ್ಯನಾರಾಯಣ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಸೃಷ್ಟಿಕರ್ತ ಪ್ರಕೃತಿಯನ್ನು ಸೃಷ್ಟಿಸಿದ್ದಾನೆ. ಸೃಷ್ಟಿಯಲ್ಲಿನ ಅಂದವನ್ನು ಚಿತ್ರಿಸಲು ಕಲಾವಿದರನ್ನು ಸೃಷ್ಟಿಸಿದ್ದಾನೆ. ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನವಾಗಿ ಮಹತ್ವ ನೀಡಬೇಕು ಎಂದರು.ಇAಗ್ಲೀಷ್‌ನ ಪದದಲ್ಲಿಯೇ ಕಲೆ ಎಂಬ ಪದವಿದೆ. ಹಾಗೆಯೇ ಸಿದ್ಧಾರ್ಥ ಕಾಲೇಜಿನ ಹೆಸರಿನಲ್ಲಿಯೂ ಕಲೆ ಇದೆ ಎಂಬುದನ್ನು ಗುರುತಿಸಿ ತಿಳಿಸಿದರು. ವಿದ್ಯಾರ್ಥಿಗಳು ಚಿತ್ರಕಲೆ ಅಭ್ಯಾಸ ಮಾಡುವುದರಿಂದ ವ್ಯಕ್ತಿತ್ವ ವಿಕಸನ, ಸೃಜನಾತ್ಮಕತೆ ಹೆಚ್ಚಾಗುತ್ತದೆ. ನಾವು ಧರಿಸುವ ಉಡುಪು, ಮಾತು, ಹಾವಭಾವ, ಬಣ್ಣ, ವಿನ್ಯಾಸ, ದೇವಾಲಯಗಳು ನಮ್ಮ ಸಂಸ್ಕೃತಿ ಎಲ್ಲದರಲ್ಲೂ ಚಿತ್ರಕಲೆ ಇದೆ. ನಾವು ಪೂಜಿಸುವ ದೇವರ ವಿಗ್ರಹ ಕೂಡ ಒಬ್ಬ ಶಿಲ್ಪಿ ನಿರ್ಮಿಸಿದ ಶಿಲ್ಪಕಲೆ ಎಂದು ಅವರು ಎಳೆ ಎಳೆಯಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು.
ತುಮಕೂರು ಜಿಲ್ಲೆಯ ಸುಮಾರು 120 ಶಾಲೆಯ 5000 ಸಾವಿರ ಶಾಲಾ ಮಕ್ಕಳು ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಫರ್ಧೆಗಳ ವಿವರಗಳು ನರ್ಸರಿ ಮಕ್ಕಳಿಗೆ ತಮಗೆ ಇಷ್ಟವಾದ ಯಾವುದಾದರೂ ಚಿತ್ರ ಬಿಡಿಸಬಹುದು, 1ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಜಲ ಜೀವನ, 5ರಿಂದ 7ನೇ ತರಗತಿಯವರಿಗೆ ತಮ್ಮ ಕಲ್ಪನೆಯ ಪ್ರಪಂಚ, 7ರಿಂದ 10ನೇ ತರಗತಿ ಅವರಿಗೆ ತಂತ್ರಜ್ಞಾನ ಮತ್ತು ಪ್ರಕೃತಿ, ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಹಾಕಾಶ ತಂತ್ರಜ್ಞಾನ ವಿಷಯಗಳನ್ನು ನೀಡಲಾಗಿತ್ತು.

(Visited 1 times, 1 visits today)