ತುಮಕೂರು: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನೀಡುವ ರಾಷ್ಟಿçÃಯ ‘ವೀರಭದ್ರ ಪ್ರಶಸ್ತಿ’ಯನ್ನು ಈ ತಿಂಗಳ 12ರಂದು ಕೇಂದ್ರ ಜಲಶಕ್ತ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪ್ರದಾನ ಮಾಡಲಾಗುತ್ತಿದೆ.
ವೇದಿಕೆಯ ಕಾರ್ಯದರ್ಶಿ ಎಸ್.ಸೋಮಶೇಖರ ಗಾಂಧಿ ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ದೆಹಲಿಯ ಭಾರತ್ ಮಂಟಪ ಸಭಾಂಗಣದಲ್ಲಿ ಈ ತಿಂಗಳ 12ರ ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸಚಿವ ವಿ.ಸೋಮಣ್ಣ ಅವರಿಗೆ ವೀರಭದ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜ್ಯೋಷಿ, ಶೋಭಾ ಕರಂದ್ಲಾಜೆ ಹಾಗೂ ರಾಜ್ಯದ ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು.
ಇದೂವರೆಗೆ ವೀರಭದ್ರ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಸಿ ಸಂಸದ, ಕೆಎಲ್‌ಇ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರಭಾಕರ ಕೋರೆ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿ ಸುಮಾರು 40 ವರ್ಷ ಕಾಲ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಈಗ ಕೇಂದ್ರ ಸಚಿವರಾಗಿರುವ ವಿ.ಸೋಮಣ್ಣ ಅವರ ಸೇವಾಸಾಧನೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಹುಬ್ಬಳ್ಳಿಯ ಮೂರು ಸಾವಿರ ಮಠದ ಶಿವಕುಮಾರ ಶಿವಯೋಗಿ ಸ್ವಾಮೀಜಿ, ತುಮಕೂರು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶಿವಗಂಗೆ ಮೇಲಣಗವಿ ಮಠದ ಮಲಯ ಶಾಂತಮುನಿ ಸ್ವಾಮೀಜಿ ಸೇರಿದಂತೆ ನೂರಕ್ಕೂ ಹೆಚ್ಚು ಮಠಾಧೀಶರು, ಸಮಾಜದ ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು ಎಂದು ಸೋಮಶೇಖರ್ ಗಾಂಧಿ ಹೇಳಿದರು. ಮುಖಂಡರಾದ ಕೆ.ಆರ್.ಲಿಂಗರಾಜು, ಮಹೇಶ್ವರಮೂರ್ತಿ ಹಾಜರಿದ್ದರು.
(Visited 1 times, 1 visits today)