ತುಮಕೂರು: ಮಾನಸಿಕ ಏಕತೆಯ ತತ್ತ÷್ವದಿಂದ ರಾಮಾಯಣ ಮಹಾಕಾವ್ಯ ವಿಶ್ವ ಕಥನವಾಯಿತು. ಇವತ್ತಿಗೆ ಬೇಕಾದ ರಾಜಕೀಯ ನೈತಿಕತೆಯ ಪಾಠವನ್ನು, ಜೀವನ ಮೌಲ್ಯವನ್ನು ರಾಮಾಯಣ ಸಾರುವುದರಿಂದ ‘ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ’ವಾಗಿ ನಮಗೆಲ್ಲ ಕಾಣುತ್ತದೆ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ವಿಭಾಗ ಹಾಗೂ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಜಂಟಿಯಾಗಿ ಹಮ್ಮಿಕೊಂಡಿರುವ ‘ರಾಮಾಯಣಂಗಳ್: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಬಗೆ’ ಎಂಬ ಪರಿಕಲ್ಪನೆಯ ಎರಡು ದಿನಗಳ ‘ಸಹಿತ-2’ ಸಾಹಿತ್ಯೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
ಅಧಿಕಾರಕ್ಕೇರಲು ರಾಮನ ಹೆಸರನ್ನು ಬಳಸುತ್ತಿರುವ ಸಂದರ್ಭವಿದು. ರಾಮಾಯಣ ಗರ್ಭಗುಡಿಯ ಕಾವ್ಯವೆಂಬ ತಪ್ಪುಗ್ರಹಿಕೆ ಮಾಯವಾಗಬೇಕು. ಮಹಾಕಾವ್ಯಗಳು ರಾಜಕೀಯ ಅಸ್ತçವಾದಾಗ ಅದರ ಅಸ್ಮಿತೆ ನಾಶವಾಗುತ್ತದೆ. ರಾಮಾಯಣ ಅಧ್ಯಯನಶೀಲ ಕಾವ್ಯವಾಗಿ ವಾಸ್ತವತೆ ಮತ್ತು ಕಲ್ಪಿತ ಕಥೆಗಳ ಸಮನ್ವಯವಾಗಿದೆ. ಆತ್ಮಸ್ಥೆöÊರ್ಯದ ಮಹಾಕಾವ್ಯ ರಾಮಾಯಣದಲ್ಲಿ ಹತಾಶೆಯಿಲ್ಲ. ಸಾಂಸ್ಕೃತಿಕ ಘಟಕಗಳನ್ನು, ಸಂಸ್ಕೃತಿಯ ಚಲನಶೀಲತೆ, ಅಧಿಕಾರ-ಭೋಗದ ನಿರಸನದ ಸ್ಥಿತ್ಯಂತರಗಳನ್ನು ಕಾಣಬಹುದು ಎಂದು ತಿಳಿಸಿದರು. ಸಮಕಾಲೀನ ಸಂದರ್ಭದಲ್ಲಿರುವ ಪ್ರಸ್ತುತತೆಯಿಂದ ರಾಮಾಯಣದ ಕಥನವನ್ನು ಇಂದಿಗೂ ಚರ್ಚಿಸುತ್ತೇವೆ. ರಾಮಾಯಣ ಮನುಷ್ಯನಲ್ಲಿ ಅಂತರ್ಗತವಾಗಿ ‘ಮನೆ ಮನೆ ರಾಮಾಯಣ’ವಾಗಿದೆ. ಜನಸಮುದಾಯದಿಂದ ಜನಪದ ರಾಮಾಯಣ ಉಗಮವಾಯಿತು. ಸಮಾಜದಿಂದ ಗ್ರಹಿಸಿದ ವಸ್ತುವನ್ನು ಆಧಾರವಾಗಿರಿಸಿಕೊಂಡು ಕವಿಗಳು, ವಿದ್ವಾಂಸರು ರಾಮಾಯಣ ಕಾವ್ಯಗಳನ್ನು, ಕಥನಗಳನ್ನು ರಚಿಸಿದರು. ಹೀಗೆ ರಾಮಾಯಣವು ಕಾಲದಿಂದ ಕಾಲಕ್ಕೆ ಮರುಹುಟ್ಟು ಪಡೆಯುತ್ತಿದೆ ಎಂದು ಹೇಳಿದರು.ರಾಮಾಯಣಕ್ಕೆ ಸಕಾರಾತ್ಮಕ ನೆಲೆಯಿರುವ ಹಾಗೆ ಅನುಚಿತವಾದ ವ್ಯಾಖ್ಯಾನಗಳೂ ಇವೆ. ಎಂದು ತಿಳಿಸಿದರು.
ಮೊದಲ ದಿನದ ಸಾಹಿತ್ಯೋತ್ಸವದಲ್ಲಿ ಕಲ್ಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಬಸವರಾಜ ಕೊಡಗಂಟಿ ‘ಕನ್ನಡದ ಜೈನ ರಾಮಾಯಣಗಳು: ಕಾಲ-ನೆಲದೊಂದಿಗಿನ ಅನುಸಂಧಾನ’ ಕುರಿತು, ಬೆಂಗಳೂರಿನ ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮಹೇಶ್ ಕುಮಾರ್ ಸಿ.ಎಸ್. ‘ಮೂರು ಸಾವಿರ ರಾಮಾಯಣ: ಏಕಿಷ್ಟು? ಬೌದ್ಧ ರಾಮಾಯಣದ ನೆವದಲ್ಲಿ ಒಂದು ಚಿಂತನೆ’ ಕುರಿತು ಮಾತನಾಡಿದರು.
ನೀನಾಸಂ ರಂಗನಿರ್ದೇಶಕ ಮಂಜು ಕೊಡಗು ನಿರ್ದೇಶನದ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕಾವ್ಯದ ‘ದಶಾನನ ಸ್ವಪ್ನ ಸಿದ್ಧಿ’ ನಾಟಕ ಪ್ರಸ್ತುತಪಡಿಸಲಾಯಿತು. ಸಹ ಪ್ರಾಧ್ಯಾಪಕ ಡಾ. ಕಿರಣ್ ಎಸ್. ಎನ್. ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ. ಅಣ್ಣಮ್ಮ ಕಲಾಪ-ಸಂವಾದ ನಡೆಸಿಕೊಟ್ಟರು.
ಕುಲಸಚಿವೆ ನಾಹಿದಾ ಜûಮ್ ಜûಮ್, ‘ಸಹಿತ-2’ ಸಾಹಿತ್ಯೋತ್ಸವದ ಸಂಘಟಕರಾದ ಪ್ರೊ. ಎಚ್. ಕೆ. ಶಿವಲಿಂಗಸ್ವಾಮಿ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕಿ ಡಾ. ಗೀತಾ ವಸಂತ ನಿರೂಪಿಸಿದರು.
(Visited 1 times, 1 visits today)