ತುಮಕೂರು: ನಮ್ಮ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ನ್ಯಾಯವಾದಿ, ಸುಫಿಯಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್. ರಮೇಶ್ ಪ್ರತಿಪಾದಿಸಿದರು.
ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜು ಸಮಾಜಕಾರ್ಯ ವಿಭಾಗ, ವರದಕ್ಷಿಣೆ ವಿರೋಧಿ ವೇದಿಕೆ-ಸಾಂತ್ವನ ಕೇಂದ್ರದ ವತಿಯಿಂದ ವಿಶ್ವ ವಿದ್ಯಾಲಯದ ಚಿವುಕಲ ಸಭಾಂಗಣದಲ್ಲಿ ಆಯೋಜಿಸಿದ್ದ, ಮಾನವ ಹಕ್ಕುಗಳ ದಿನಾಚರಣೆ ವಿಚಾರಗೋಷ್ಟಿ- ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ ಸಹಬಾಳ್ವೆಗೆ ಒತ್ತು ಕೊಡುವುದಕ್ಕಿಂತ ಅಶಾಂತಿ, ಅಸಹನೆಗೆ ಒತ್ತು ನೀಡುವವರ ಸಂಖ್ಯೆ ಸಮಾಜದಲ್ಲಿ ಹೆಚ್ಚುತ್ತಿದೆ. ಧರ್ಮ ಜಾತಿಗಳನ್ನು ಮುಂದಿಟ್ಟುಕೊAಡು ಕಲಹಗಳಾಗುತ್ತಿವೆ. ಮಾರಣ ಹೋಮಗಳು ನಡೆಯುತ್ತಿವೆ. ಇವುಗಳ ಬಗ್ಗೆ ಯುವ ಜನತೆ ಎಚ್ಚರಿಕೆಯಿಂದ ಇರಬೇಕು ಎಂದರು.
ನಮ್ಮ ಸಂವಿಧಾನವು ಘನತೆಯ ಹಕ್ಕನ್ನು ಪ್ರತಿಪಾದಿಸಿದೆ. ಆದರೆ ಒಟ್ಟಾರೆ ಸಮಾಜದಲ್ಲಿ ಅಂತಹ ವಾತಾವರಣವೇ ಕಾಣುತ್ತಿಲ್ಲ. ಆರೋಗ್ಯ ಸಮಸ್ಯೆ ಸುಧಾರಿಸಿಲ್ಲ. ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕೈಗೆಟುಕುತ್ತಿಲ್ಲ. ವಿದ್ಯೆ ಕಲಿತವರಿಗೆ ಉದ್ಯೋಗ ಸಿಗುತ್ತಿಲ್ಲ. ಇದರಿಂದಾಗಿ ಭ್ರಮನಿರಸನಗೊಂಡ ಯುವಕರು ಅಡ್ಡದಾರಿ ಹಿಡಿಯುತ್ತಿದ್ದಾರೆ. ಸರ್ಕಾರಿ ವ್ಯವಸ್ಥೆಯಲ್ಲಿರುವ ಆರೋಗ್ಯ ಕೇಂದ್ರಗಳನ್ನು ಸರ್ಕಾರ ಉನ್ನತೀಕರಿಸಿ ಅವುಗಳಿಗೆ ಎಲ್ಲ ಸವಲತ್ತುಗಳನ್ನು ಕಲ್ಪಿಸಬೇಕು. ಯುವಜನತೆಗೆ ಉದ್ಯೋಗ ದೊರಕುವಂತೆ ಮಾಡಬೇಕು. ಆಗ ಅಪರಾಧ ಕೃತ್ಯಗಳು ಕಡಿಮೆಯಾಗುತ್ತವೆ ಎಂದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಗಿರಿಜಾ ಕೆ.ಎಸ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹೇಮಂತ್ ಕುಮಾರ್ ಕೆ.ಪಿ. ಕಾರ್ಯಕ್ರಮ ನಿರೂಪಿಸಿದರು. ಸಾಂತ್ವನ ಕೇಂದ್ರದ ಪಾರ್ವತಮ್ಮ, ಗಂಗಲಕ್ಷಿö್ಮ, ಉಪಸ್ಥಿತರಿದ್ದರು.
(Visited 1 times, 1 visits today)