ತುಮಕೂರು: ಶ್ರೀದೇವಿ ಇಂಜಿನಿಯರಿAಗ್ ಕಾಲೇಜು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರುಗಳ ಸಹಯೋಗದೊಂದಿಗೆ ಕೇಂದ್ರ ಕರ್ನಾಟಕ ವಿಭಾಗೀಯ ಮಟ್ಟದ ಮಹಿಳಾ ಥ್ರೋಬಾಲ್ ಪಂದ್ಯಾವಳಿಯನ್ನು ಡಿ.12 ಮತ್ತು 13 ರವರೆಗೆ ಆಯೋಜಿಸಲಾಗಿತ್ತು.
ಪಂದ್ಯಾವಳಿಯನ್ನು ಉದ್ಘಾಟಿಸಿದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‌ರವರು ಮಾತನಾಡಿ ಈ ಪಂದ್ಯಾವಳಿಯನ್ನು ಆಯೋಜಿಸಲು ಅವಕಾಶ ನೀಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಧನ್ಯವಾದಗಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡಾಮನೋಭಾವನೆಯಿಂದ ಆಟದಲ್ಲಿ ಭಾಗವಹಿಸಬೇಕು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯನ್ನು ಮೆರೆಯಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರಿನ ವಿಟಿಯು ಪ್ರಾದೇಶಿಕ ಕಚೇರಿಯ ನಿರ್ದೇಶಕರಾದ ಡಾ.ಹೆಚ್.ಆರ್.ಸುದರ್ಶನರೆಡ್ಡಿರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸದಾ ಮೊಬೈಲ್‌ನಲ್ಲಿ ನಿರಂತರರಾಗಿರುವುದರಿAದ ಕ್ರೀಡಾಸಕ್ತಿ ಕಡಿಮೆಯಾಗುತ್ತಿದೆ. ಹಾಗೆಯೇ ಆರೋಗ್ಯವು ಅಸೌಖ್ಯವಾಗುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪ್ರತಿದಿನದಲ್ಲಿ 1 ರಿಂದ 2 ಗಂಟೆಯಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯ ಮತ್ತು ಬುದ್ದಿಮಟ್ಟವು ಹೆಚ್ಚಾಗುತ್ತದೆ. ಪೋಷಕರು ಮತ್ತು ತಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂತರಾಷ್ಟಿçÃಯ ಥ್ರೋಬಾಲ್ ಆಟಗಾರ್ತಿ ಜಾಯ್ಸ್ವೆಸ್ಲಿರವರು ಮಾತನಾಡಿ ಮಹಿಳೆಯರು ಕೂಡ ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅವರ ದೈಹಿಕ ಆರೋಗ್ಯದ ಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು ಹಾಗು ಕ್ರೀಡೆಯಿಂದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ವಿಟಿಯು ಕೇಂದ್ರ ಕರ್ನಾಟಕ ವಿಭಾಗೀಯ ಸಮನ್ವಯಾಧಿಕಾರಿಯಾದ ಡಿ.ಎಲ್.ಸೋಮಶೇಖರ್‌ರವರು ಮಾತನಾಡಿ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯ ತುಂಬಾ ಯಶಸ್ವಿಯಾಗಿ ಆಯೋಜನೆ ಮಾಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಡಾ.ರಮಣ್ ಎಂ ಹುಲಿನಾಯ್ಕರ್, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿಯಾದ ಅಂಬಿಕಾ ಎಂ ಹುಲಿನಾಯ್ಕರ್, ಮತ್ತಿತರರು ಭಾಗವಹಿಸಿದ್ದರು.

(Visited 1 times, 1 visits today)