ತುಮಕೂರು: ಸಮಾಜದ ಪ್ರತಿಯೊಬ್ಬರೂ ತಾರತಮ್ಯವಿಲ್ಲದೆ, ಸಮಾನವಾಗಿ ಬಾಳುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಹಕ್ಕುಗಳ ಅರಿವಿಲ್ಲದವರಿಂದ ಕಾನೂನಿನ ಉಲ್ಲಂಘನೆ ಆಗಬಹುದು ಅಥವಾ ಹಕ್ಕುಗಳ ಬಗ್ಗೆ ತಿಳಿದಿಲ್ಲದವರ ಮೇಲೆ ದೌರ್ಜನ್ಯ ನಡೆಯಬಹುದು. ಈ ಕಾರಣದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾನವ ಹಕ್ಕುಗಳ ಅರಿವು ಮೂಡಿಸಬೇಕು ಎಂದು ಅಡಿಷನಲ್ ಎಸ್ಪಿ ವಿ.ಮರಿಯಪ್ಪ ಹೇಳಿದರು.
ಮಾನವ ಹಕ್ಕುಗಳ ಜಾಗೃತಿ ದಳ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಆಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಯಾರ ಹಕ್ಕನ್ನು ಕಸಿಯುವಂತಿಲ್ಲ, ಎಲ್ಲರಿಗೂ ಸಮಾನ ಹಕ್ಕಿದೆ. ಇದಕ್ಕೆ ಸಂಬAಧಿಸಿದAತೆ ನಿಬಂಧನೆಗಳನ್ನು ರೂಪಿಸಲಾಗಿದೆ.
ಹಕ್ಕುಗಳ ಅರಿವು ಬೆಳೆಸಿಕೊಂಡರೆ ಸಮಾಜದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬಾಳಲು ಸಾಧ್ಯವಾಗುತ್ತದೆ ಎಂದರು.
ಮಾನವ ಹಕ್ಕುಗಳ ಅರಿವಿಲ್ಲದವರು, ಕಾನೂನಿನ ತಿಳವಳಿಕೆಯಿಲ್ಲದವರು, ಅಮಾಯಕರು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಂತಹವರಲ್ಲಿ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು.
ಅವರ ಹಕ್ಕುಗಳು ದಮನವಾಗದಂತೆ ನೆರವಾಗಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತನ್ನ ಮೂಲಭೂತ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದರು.
ವಿದ್ಯೋದಯ ಫೌಂಡೇಶನ್‌ನ ಹೆಚ್.ಎಸ್.ರಾಜು, ಮಾನವ ಹಕ್ಕುಗಳ ಜಾಗೃತ ದಳದ ರಾಜ್ಯ ಅಧ್ಯಕ್ಷ ಲೋಕೇಶ್ವರ್, ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶಮಾ ಸೈಯದಿ,
ಉಪನ್ಯಾಸಕ ಡಾ.ಜಿ.ವೆಂಕಟೇಶ್, ಹಿರಿಯ ನ್ಯಾಯವಾದಿ ಬೆಳಗೆರೆ ಶಿವಕುಮಾರ್, ಮಾನವ ಹಕ್ಕುಗಳ ಜಾಗೃತಿ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪ್ರಸಾದ್, ವಿದ್ಯೋದಯ ಸಂಸ್ಥೆ ಸಿಇಒ ಪ್ರೊ.ಕೆ.ಚಂದ್ರಣ್ಣ ಮೊದಲಾದವರು ಭಾಗವಹಿಸಿದ್ದರು.
(Visited 1 times, 1 visits today)