ತುಮಕೂರು: ಶಿಕ್ಷಣ ಸಂಸ್ಥೆಯ ಸ್ಥಾಪನೆಯ ಮೂಲಕ ನುರಾರು ಜನರಿಗೆ ಉದ್ಯೋಗ ಮತ್ತು ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿದೀಪವಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗAಗಾಧರಯ್ಯನವರ 29ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಸಿದ್ಧಾರ್ಥ ನಗರದಲ್ಲಿ ಇಂದು ನಡೆಯಿತು.
ಬೌದ್ಧ ಭಿಕ್ಖು ಮಹಾಸಂಘದ ಬಂತೇಜಿ ಮತ್ತು ಸಹಸದಸ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯನವರ 29ನೇ ವರ್ಷದ ಪುಣ್ಯಸ್ಮರಣೆಯನ್ನು ಬೌದ್ಧ ಬಿಕ್ಕುಗಳಿಂದ ತಿಸರಣ ಗಮನ ಮತ್ತು ಗ್ರಹಣ ಹಾಗೂ ಪುಣ್ಯಾನುಮೋದನಾ ಸ್ಮರಣೆ ಮತ್ತು ನುಡಿ ನಮನವನ್ನು ಸಲ್ಲಿಸಲಾಯಿತು.
ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯ, ಶ್ರೀಮತಿ ಗಂಗಾಮಾಳಮ್ಮ ಮತ್ತು ಡಾ.ಜಿ.ಶಿವಪ್ರಸಾದ್ರವರ ಸಮಾಧಿಗೆ ಪೂಜೆ ಮಾಡಿ ಪುಷ್ಪಮಾಲೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯಗಳನ್ನು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಕುಟುಂಬದ ಸದಸ್ಯರು ವಿಧಿ ವಿಧಾನಗಳನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಎಚ್.ಕೆ.ಕುಮಾರಸ್ವಾಮಿ, ಆಡಳಿತಾಧಿಕಾರಿ ನಂಜುAಡಪ್ಪ, ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವರಾದ ಡಾ.ಎಂ.ಝೆಡ್ ಕುರಿಯನ್, ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್, ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ.ಎನ್, ಉಪ ಕುಲಸಚಿವರಾದ ಡಾ.ಸುದೀಪ್ ಕುಮಾರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ, ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಜಿ., ಜಿಲ್ಲಾ ಪೋಲೀಸ್ ವರಿಷ್ಠಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆಯ ಆಯುಕ್ತರಾದ ಬಿ.ಅಶ್ವಿಜಾ ಸಾಹೇ ವಿಶ್ವವಿದ್ಯಾಲಯದ ಸಿಬ್ಬಂದಿ, ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಶ್ರೀ ಸಿದ್ಧಾರ್ಥ ಇಂಜಿನಿಯ ರಿಂಗ್ ಕಾಲೇಜಿನ ಬೋಧಕ-ಬೋಧಕೇತರ ವರ್ಗ ಸೇರಿದಂತೆ ಅಂಗ ಸಂಸ್ಥೆಗಳ ಮುಖ್ಯಸ್ಥರು ಗಳು, ಭಾಗವಹಿಸಿದ್ದರು.

(Visited 1 times, 1 visits today)