ತುಮಕೂರು: ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ನಾಗವಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ ಮೂಡ್ಲಯ್ಯ ಅಭಿಪ್ರಾಯಪಟ್ಟರು.
ಗ್ರಾಮಾಂತರದ ನಾಗವಲ್ಲಿ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಮತ್ತು ನೌಕರರ ಸಂಘ, ತುಮಕೂರು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ತುಮಕೂರು ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರ ಪಾತ್ರ ಬಹಳ ಮುಖ್ಯವಾಗಿದೆ. ಹಳ್ಳಿಗಳಲ್ಲಿನ ಸಮಸ್ಯೆಗಳ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹಳ್ಳಿಗಳಲ್ಲಿ ಮುಖ್ಯವಾಗಿ ಚರಂಡಿ,ಕುಡಿಯುವ ನೀರು ಮತ್ತು ಇತರೆ ಕೆಲಸ ಕಾರ್ಯಗಳಿಗೆ ಸದಾ ಒತ್ತು ನೀಡುತ್ತಿರುವ ಅಧಿಕಾರಿಗಳ ಆರೋಗ್ಯಕ್ಕೆ ಕ್ರೀಡಾಕೂಟ ಸಹಕಾರಿ ಎಂದು ಹೇಳಿದರು.
ತುಮಕೂರು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಕುಮಾರ್ ಮಾತನಾಡಿ, ಗ್ರಾಮೀಣಭಿವೃದ್ಧಿ ಇಲಾಖೆಯ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿನ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಸದಾ ಒತ್ತಡದಿಂದ ಇರುವ ಅಧಿಕಾರಿಗಳು ತಮ್ಮ,ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಕ್ರೀಡಾಕೂಟವನ್ನು ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಮಾತ್ರ ಆಯೋಜಿಸಲಾಗಿದೆ ಎಂದರು.
ಮಹಿಳಾ ಕ್ರೀಡಾಪಟುಗಳಿಗೆ ಹಾಗೂ ಪುರುಷ ಕ್ರೀಡಾಪಟುಗಳಿಗೆ ಕೊಕ್ಕೊ,ವಾಲಿಬಾಲ್ ಸೇರಿದಂತೆ ಹಲವಾರು ಕ್ರೀಡೆಗಳನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಸುಮಾರು 400 ಹೆಚ್ಚಿನ ಅಧಿಕಾರಿ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಕ್ರೀಡಾಕೂಟ ಆಯೋಜಿಸಿರುವುದರಿಂದ ಅಧಿಕಾರಿಗಳು ಒತ್ತಡದಿಂದ ಹೊರ ಬಂದು ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ನುಡಿದರು.
ತುಮಕೂರು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಮತ್ತು ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್‌ಮೂರ್ತಿ ಮಾತನಾಡಿ,ಇಂದು ಆಯೋಜಿಸಿರುವ ಕ್ರೀಡಾಕೂಟ ತುಮಕೂರು ತಾಲೂಕಿಗೆ ಒಳಪಡುವ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಮಾತ್ರ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಎಡಿಒ ಮಂಜುನಾಥ್, ಸಂಘದ ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ತೇಜಸ್,ಗೌರವಾಧ್ಯಕ್ಷ ಮೋಹನ್‌ಕುಮಾರ್ ಕೆ.ಟಿ, ಭಾಗವಹಿಸಿದ್ದರು.
(Visited 1 times, 1 visits today)