ತುಮಕೂರು: ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತ ರಾಜಕಾರಣದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದು ದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದÀ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತ ರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ದೇಶದ ಹಿತಚಿಂತನೆಯು ಪಕ್ಷದಿಂದ ನಾಯಕರ ಹಿತಚಿಂತನೆಗೆ ಇಳಿದಿದೆ. ವ್ಯಕ್ತಿಗತ ರಾಜಕಾರಣ ಎಂದಿಗೂ ಅಸಮಾನತೆಯನ್ನು ತೋರಿಸುತ್ತದೆ. ಸರ್ಕಾರವನ್ನು, ದುರಾಡಳಿತವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂದು, ದೇಶ ವಿರೋಧಿ ಚಟುವಟಿಕೆಯ ಕಾನೂನಿನ ಅಡಿಯಲ್ಲಿ ಬಂಧಿಸುತ್ತಾರೆ. ನಾಯಕತ್ವ ಏಕತ್ವವಾಗಿ ಸರ್ವಾಧಿಕಾರ ತಲೆದೂರಿದೆ. ಬಹುತ್ವದ ನಾಯಕತ್ವ ಇಂದಿನ ಅಗತ್ಯವಾಗಿದೆ. ನಾಯಕನಲ್ಲಿ ಬಹುತ್ವ ಜೀವಿಸಬೇಕು ಎಂದರು.
ಮುಖ್ಯಮAತ್ರಿ ಹಾಗೂ ಪ್ರಧಾನ ಮಂತ್ರಿಯ ಮುಖವನ್ನು ಪ್ರಕಟಿಸಿ ಚುನಾವಣೆಗಳನ್ನು ಎದುರಿಸುತ್ತಿರುವುದು ಸಂಸದೀಯ ಪ್ರಜಾಪ್ರಭುತ್ವವೇ? ಈ ನಡೆ ಶಾಸಕರ ಮತ್ತು ಸಂಸದರ ಹಕ್ಕಿಗೆ ಚ್ಯುತಿ ತಂದAತೆ. ಇದನ್ನು ಪ್ರಜೆಗಳು ಹಾಗೂ ಮಾಧ್ಯಮದವರು ಪ್ರಶ್ನಿಸುತ್ತಿಲ್ಲವೇಕೆ? ವ್ಯಕ್ತಿ ಪೂಜೆಯಲ್ಲಿ ನಿರತರಾಗಿರುವ ಪ್ರಜೆಗಳಿಗೆ ಉಳಿಗಾಲವಿಲ್ಲ ಎಂದು ತಿಳಿಸಿದರು.
ತಾತ್ವಿಕ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು, ಜನಪ್ರತಿನಿಧಿಗಳು ಬದುಕುತ್ತಿಲ್ಲ. ಬೌದ್ಧಿಕ ವಲಯದ ವಿಭಜಿತ ರೂಪವು ವಿರಾಟ ರೂಪ ತಾಳಿದೆ. ಸೈದ್ಧಾಂತಿಕ ಬದ್ಧತೆಯೊಂದಿಗೆ ಸಂವಹನ, ಸಂವಾದವಿರಬೇಕು. ಜಾತಿ, ಧರ್ಮವು ರಾಜಕೀಯ ನೆಲೆಯಲ್ಲಿ ದ್ವೇಷಕ್ಕೆ ಕಾರಣವಾಗುತ್ತಿದೆ. ದ್ವೇಷೋತ್ಪಾದನೆಯ ದೇಶವಾಗಿ ಭಾರತ ಬದಲಾಗುತ್ತಿದೆ. ನುಡಿ ನೈತಿಕತೆಯ ನಾಶದ ಸಂದರ್ಭದಲ್ಲಿದ್ದೇವೆ. ಪ್ರಜಾಪ್ರಭುತ್ವದ ಪರಿಭಾಷೆಯನ್ನು ಮರೆತಿದ್ದೇವೆ ಎಂದರು.ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಪ್ರೊ. ಜಯಪ್ರಕಾಶ್ ಮಾವಿನಕುಳಿ, ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಪ್ರೊ. ಲಿಂಗರಾಜು ಬಿ. ಎಸ್., ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿಯ ಅಧ್ಯಕ್ಷ ಉಪಸ್ಥಿತರಿದ್ದರು.

(Visited 1 times, 1 visits today)