ತುರುವೇಕೆರೆ: ರಾಜ್ಯ ಸರ್ಕಾರ ನಿವೃತ್ತ ಸರ್ಕಾರಿ ನೌಕರರ ಮೂಲಭೂತ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ನಮ್ಮಗಳ ಕುಟುಂಬಕ್ಕೆ ನೈತಿಕ ಚೇತನ ನೀಡಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಹ್ಲಾದ್ ಹೇಳಿದರು.
ಪಟ್ಟಣದ ಹೊರಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ತಾಲ್ಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ದಿನಾಚರಣೆ ಹಾಗು ಹಿರಿಯ ನಾಗರಿಕರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ರಾಜ್ಯ ಜಂಟಿ ಕಾರ್ಯದರ್ಶಿ ರಾಜಯ್ಯ, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅರಳೀಕೆರೆ ಶಿವಯ್ಯ, ನಿವೃತ್ತ ಬಿಇಓ ಸೋಮಶೇಖರ್, ನಿವೃತ್ತ ಡಿಡಿಪಿಐ ರಂಗಯ್ಯ, ಜಿಲ್ಲಾ ಉಪಾಧ್ಯಕ್ಷ ಅನಂತರಾಮು, ಖಜಾಂಚಿ ನರಸಿಂಹರೆಡ್ಡಿ, ಪತ್ತಿನ ಸಹಕಾರ ಸಂಘದ ಸಿಇಓ ಸುಜಾತ, ಉಪಸ್ಥಿತರಿದ್ದರು.

(Visited 1 times, 1 visits today)