ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಾಡಾಗಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ವಾಲಿ ಬಾಲ್ ಸ್ಪರ್ದೆಯಲ್ಲಿ, ಪುರುಷರ ವಿಭಾಗದಲ್ಲಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಜಿಎಸ್ ಕಾಲೇಜಿಗೆ ಚಾಂಪಿಯನ್ ಪಟ್ಟ ದೊರೆತಿದೆ. ಮಂಗಳೂರಿನ ನಿಟ್ಟೆ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನವನ್ನು ತುಮಕೂರಿನ ಎಸ್.ಎಸ್.ಐ.ಟಿ ಮತ್ತು ಎಸ್.ಐ.ಟಿ ಕಾಲೇಜುಗಳು ಪಡೆದುಕೊಂಡಿವೆ. ಮಹಿಳೆಯರ ವಿಭಾಗದಲ್ಲಿ ತುಮಕೂರಿನ ಎಸ್.ಎಸ್.ಐ.ಟಿ ಕಾಲೇಜಿನ ಮಹಿಳೆಯರ ತಂಡ ಮೊದಲ ಸ್ಥಾನ ಪಡೆದುಕೊಂಡರೆ, ಹಾಸನದ ಎನ್.ಎ.ವಿ.ಕೆೆ.ಐ.ಎಸ್ಎಂ ಜಿನಿಯರಿAಗ್ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಸ್ಟರ್ಧೆಯಲ್ಲಿ 16 ಪುರುಷರ ತಂಡಗಳು, ಮತ್ತು 6 ಮಹಿಳೆಯರ ತಂಡಗಳು ರಾಜ್ಯದ ಹಾಸನ, ಮಂಗಳೂರು, ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕಾಲೇಜುಗಳಿಂದ ಆಗಮಿಸಿದ್ದವು.
ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಎಸ್.ಎಸ್.ಐ.ಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್. ರವಿಪ್ರಕಾಶ ಅವರು ರಾಜ್ಯದ ವಿವಿಧ ಜಿಲ್ಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇಂತಹ ಅನೇಕ ಸ್ಪರ್ಧೆಗಳನ್ನು ನಡೆಸುವುದಾಗಿ, ವಿದ್ಯಾರ್ಥಿಗಳು ಇದೇ ರೀತಿ ಉತ್ಸಾಹದಿಂದ ಭಾಗವಹಿಸುವಂತೆ ಕೋರಿದರು. ಸ್ಪರ್ಧೆಯ ತೀರ್ಪುಗಾರರು ಕೂಡ ನಿಷ್ಪಕ್ಷಪಾತವಾಗಿ ತೀರ್ಪು ನೀಡಿದ್ದು, ಕ್ರೀಡಾಳುಗಳ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಿದೆ ಎಂದರು.
ಟೂರ್ನಮೆಂಟ್‌ನಲ್ಲಿ ದೈಹಿಕ ಶಿಕ್ಷಕರು ಹಾಗೂ ತರಬೇತುದಾರರಾದ ಚನ್ನೇಗೌಡ, ತುಮಕೂರು ಜಿಲ್ಲೆಯ ವಾಲಿ ಬಾಲ್ ಸಂಸ್ಥೆಯ ತೀರ್ಪುಗಾರರಾದ ಸುರೇಶ್, ಸೇರಿದಂತೆ ಮತ್ತಿತರ ತರಬೇತುದಾರರು, ರೆಫರಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
(Visited 1 times, 1 visits today)