ತುಮಕೂರು : ಯುವ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ನೀಡುವ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಜಿಲ್ಲಾಧಿಕಾರಿ ಕೊಠಡಿಯಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರ/ಖಾಸಗಿ ಉದ್ಯೋಗ ಹೊಂದದೇ ಇರುವ, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ರಾಜ್ಯದಲ್ಲಿ ವಾಸವಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್, ಇಲಾಖೆಯ ಸಿಬ್ಬಂದಿ ಅರುಣ್ ಉಪಸ್ಥಿತರಿದ್ದರು.
(Visited 1 times, 1 visits today)