ತುಮಕೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ತುಮಕೂರಿನ ಜ್ಞಾನ ಸಿಂಧು ಸ್ವಾಮಿ ಅವರನ್ನು ಆಯ್ಕೆ ಮಾಡಿ ಕೆ ಆರ್ ಎಸ್ ಪಕ್ಷದ ಕಾರ್ಯಕಾರಿ ಸಮಿತಿ ಆದೇಶ ಹೊರಡಿಸಿದೆ.
ಪಕ್ಷವೂ ಮುಂಬುರವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಣೆ ಮಾಡಲು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಪುನರಚನೆ ಕಾರ್ಯ ಕೈಗೊಂಡಿತ್ತು.
ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹೆಸರು ಸೂಚಿಸಿ ಮತ ಹಾಕುವ ಪ್ರಕ್ರಿಯೆ ಯಲ್ಲಿ ಒಮ್ಮತದಿಂದ ರಾಜ್ಯ ಕಾರ್ಯದರ್ಶಿಯಾಗಿದ್ದ ಜ್ಞಾನಸಿಂಧುಸ್ವಾಮಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಪಕ್ಷದ ಬಲವರ್ಧನೆ, ಸಂಘಟನಾ ಚಾತುರ್ಯ, ನಾಯಕತ್ವ ಹಾಗೂ ವಿವಿಧ ಆಯಾಮಗಳಲ್ಲಿ ಮುಂದೆ ಇರುವ ಅವರನ್ನು ಪಕ್ಷವು ಉನ್ನತಮಟ್ಟಕ್ಕೆ ಆಯ್ಕೆ ಮಾಡುವ ಮೂಲಕ ಮತ್ತಷ್ಟು ಜವಾಬ್ದಾರಿ ಹಂಚಿದೆ.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಜ್ಞಾನಸಿಂಧು ಸ್ವಾಮಿ ಅವರು, ಪಕ್ಷಕ್ಕೆ ದುಡಿದ ಪ್ರಾಮಾಣಿಕತೆಯನ್ನು ಗಮನಿಸಿ ಉಪಾಧ್ಯಕ್ಷ ಸ್ಥಾನಕ್ಕೇರಿಸಿ ಆಯ್ಕೆ ಮಾಡಿದ್ದು ಪಕ್ಷದಲ್ಲಿ ನನ್ನ ಜವಾಬ್ದಾರಿಯನ್ಮು ಇನ್ನೂ ಹೆಚ್ಚು ಮಾಡಿದೆ. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟಿತವಾಗಿ ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತೇನೆ. ಈಗಾಗಲೇ ಪಕ್ಷದಿಂದ ಜಿಲ್ಲಾಮಟ್ಟ ಹಾಗೂ ಸ್ಥಳೀಯ ಮಟ್ಟದಲ್ಲೂ ಹಲವು ಭ್ರಷ್ಟಾಚಾರ ವಿರೋಧಿ ಹೋರಾಟಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಅದನ್ನು ಇನ್ನಷ್ಟು ವಿಸ್ತರಿಸಿ ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆಗೆ ಪಣ ತೊಡುವ ಕೆಲಸ ಮಾಡುತ್ತೇವೆ ಎಂದರು.
ದಿನದಿAದ ದಿನಕ್ಕೆ ರಾಜ್ಯದಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿ ಕ್ಷೀಣಿಸುತ್ತಿದೆ. ಇದಕ್ಕೆ ಇಲಾಖೆಯಲ್ಲಿ ಬದ್ಧತೆ ಇಲ್ಲದಿರುವ ಅಧಿಕಾರಿಗಳು ಮತ್ತು ಭ್ರಷ್ಟ ರಾಜಕಾರಣಿಗಳು ಮತ್ತು ಸಚಿವರೇ ನೇರ ಕಾರಣ. ಈ ವರ್ಷದಲ್ಲಿ ಬಿಡುಗಡೆಗೊಂಡ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಅರಣ್ಯ ಪ್ರದೇಶ ಕಡಿಮೆಯಾಗಿದೆ ಎಂಬ ವರದಿ ಬಹಿರಂಗಗೊAಡಿದೆ. ಬೇರೆ ಬೇರೆ ದೇಶಗಳಲ್ಲಿ ಅರಣ್ಯವನ್ನು ಸಂರಕ್ಷಿಸುವ ಕೆಲಸ ಮಾಡುತ್ತಿದ್ದು, ನಮ್ಮಲ್ಲಿ ಸರಿಯಾಗಿ ಅರಣ್ಯ ಸಂರಕ್ಷಿಸುವ ಮತ್ತು ಅದನ್ನು ಹೆಚ್ಚಿಸುವ ಕಾರ್ಯಗಳನ್ನು ಮಾಡುತ್ತಿಲ್ಲ . ಇದರಲ್ಲಿ ಭ್ರಷ್ಟ ಅಧಿಕಾರಿಗಳ ಪಾಲೂ ಹೆಚ್ಚಿದೆ ಎಂದು ಆರೋಪಿಸಿದರು. ಹವಾಮಾನ ಬದಲಾವಣೆ ಮತ್ತು ಭೂ ತಾಪಮಾನ ಏರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇರುವ ಭ್ರಷ್ಟ ಪಕ್ಷಗಳು ಕಾರ್ಯನಿರ್ವಹಣೆ ಮಾಡುತ್ತಿಲ್ಲ ಆದ್ದರಿಂದ ರೈತರು , ಕೂಲಿ ಕಾರ್ಮಿಕರು , ಮಹಿಳೆಯರು ತೊಂದರೆ ಸಿಲುಕುತ್ತಿದ್ದು ಎಲ್ಲರು ಸುಸ್ಥಿರವಾಗಿ ಬದುಕುವ ಸುಸ್ಥಿರ ಸಮಾಜ ಮತ್ತು ಸುಸ್ಥಿರ ಪರಿಸರವನ್ನು ಕಟ್ಟುತ್ತೇವೆ ಎಂದರು.
(Visited 1 times, 1 visits today)