ತುಮಕೂರು: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

ಸ್ವಾಮೀಜಿ ಅವರಿಗೆ ತುಮಕೂರು ವಿವಿಯ 17ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸ್ವಾಮೀಜಿ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿರಲಿಲ್ಲ.

ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಚುನಾವಣೆಯಲ್ಲಿ ತಳ ಸಮುದಾಯದ ಮತಗಳನ್ನು ಪಡೆಯುವ ಪಕ್ಷಗಳು, ಚುನಾವಣೆಯ ನಂತರ ಆ ಸಮುದಾಯಗಳಿಗೆ ನೀಡಿದ ಭರವಸೆಗಳನ್ನು, ಹಿತವನ್ನು ಮರೆಯುತ್ತಾರೆ. ರಾಜಕೀಯ ಇಚ್ಛಾಶಕ್ತಿ ಹಾಗೂ ಅಸಂಘಟನೆಯ ಕೊರತೆಯಿಂದಾಗಿ ಮೀಸಲಾತಿ ಸರಿಯಾದ ಪ್ರಮಾಣದಲ್ಲಿ ಹಂಚಿಯಾಗುತ್ತಿಲ್ಲ. ನೀತಿಯಿಂದ ಮನುಷ್ಯನ ವ್ಯಕ್ತಿತ್ವವನ್ನು ಅಳೆದಾಗ ಸಮ ಸಮಾಜ ರೂಪುಗೊಳ್ಳಲಿದೆ ಎಂದರು.

ಆಧ್ಯಾತ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಪ್ರಸನ್ನಾನಂದ ಸ್ವಾಮೀಜಿ ಅವರು ಗದಗ ಜಿಲ್ಲೆಯ ಹಿರೇಮಣ್ಣೂರಿನವರು. ಶಾಲಾ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮನಸ್ಸು ಧಾರ್ಮಿಕತೆಯ ಕಡೆ ಸೆಳೆಯಲ್ಪಟ್ಟು ಸನ್ಯಾಸದ ಮೂಲಕ ಪಾರಮಾರ್ಥಿಕ ಜೀವನ ಕೈಗೊಂಡರು. ಹಿಂದುಳಿದ ಸಮುದಾಯಗಳ ಏಳ್ಗೆಗಾಗಿ ಹಗಲಿರುಳು ದುಡಿಯುತ್ತಿದ್ದು, ಹದಿನಾರು ದಿನಗಳ ಕಾಲ ರಾಜನಹಳ್ಳಿಯಿಂದ ರಾಜಧಾನಿಯವರೆಗೆ ಸುಮಾರು ನಾಲ್ಕುನೂರು ಕಿ.ಮಿ.ಗಳ ಬೃಹತ್ ಪಾದಯಾತ್ರೆಯನ್ನು ಕೈಗೊಂಡು ಕೆಳಸಮುದಾಯಗಳ ಅಳಲನ್ನು ಸರಕಾರದ ಮುಂದೆ ಸಮರ್ಥವಾಗಿ ಮಂಡಿಸಿ ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಮತ್ತು ವಿವಿಧ ಲಲಿತ ಕಲೆಗಳಲ್ಲಿ ಅಭಿರುಚಿ ಹೊಂದಿರುವ ಇವರು, ವಿದ್ವತ್ ಪೂರ್ಣ ಬರಹಗಳನ್ನೊಳಗೊಂಡ ‘ವಾಲ್ಮೀಕಿ ವಿಜಯ ಸ್ಮರಣ ಸಂಪುಟ’ವೆAಬ ಗ್ರಂಥರಚನೆಗೆ ತಮ್ಮ ವಿಶಿಷ್ಟವಾದ ಕೊಡುಗೆಯನ್ನು ನೀಡಿದ್ದಾರೆ. ತಳ ಸಮುದಾಯಗಳ ಹಾಗೂ ನಾಯಕ ಜನಾಂಗದ ಇತಿಹಾಸ, ಸಾಹಿತ್ಯ, ಸಮಾಜ ಮತ್ತು ಧಾರ್ಮಿಕತೆಗಳ ಕುರಿತ ವಿದ್ವತ್ತನ್ನು ತಮ್ಮ ಆಧ್ಯಾತ್ಮಿಕ ವ್ಯಕ್ತಿತ್ವದ ಭಾಗವಾಗಿಸಿಕೊಂಡಿರುವ ಅಧ್ಯಯನಶೀಲರು. ಸ್ವಾಮೀಜಿಯವರ ನಿರಂತರ ಸೇವೆ ಮತ್ತು ಸಾಧನೆಗಳನ್ನು ಗುರುತಿಸಿ, ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಈ ಸಾಧನೆಗಳನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾನಿಲಯವು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿತು.

ತುಮಕೂರು ವಿವಿಯ ಅಕಾಡೆಮಿಕ್, ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಭಾಗವಹಿಸಿದ್ದರು.

(Visited 1 times, 1 visits today)