ತುಮಕೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಸರಣಿ ಹಗರಣ, ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಇದರ ವಿರುದ್ಧ ಬಿಜೆಪಿಯಿಂದ ಸಾಕಷ್ಟು ಪ್ರತಿಭಟನೆ ನಡೆದಿವೆ. ಇಷ್ಟಾಗಿಯೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ. ಸರ್ಕಾರ ಆರೋಗ್ಯ ಸೇವೆಯನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ, ಆರೋಗ್ಯ ಇಲಾಖೆಯ ತಿಮಿಂಗಿಲಗಳು ಬಾಣಂತಿಯರನ್ನು ನುಂಗುತ್ತಿವೆ. ಇದಕ್ಕೆಲ್ಲಾ ಸರ್ಕಾರವೇ ನೇರ ಹೊಣೆ. ಗುತ್ತಿಗೆದಾರ ಸಚಿನ್ ಆತ್ಯಹತ್ಯೆ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂಬ ಆರೋಪವಿದೆ. ಎಷ್ಟೋ ಹಗರಣಗಳನ್ನು ಮಾಡಿಯೂ ರಾಜೀನಾಮೆ ನೀಡದ ಭಂಡ ಸರ್ಕಾರ ರಾಜ್ಯದಲ್ಲಿದೆ ಎಂದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂದೀಪ್‌ಗೌಡ, ಕಾರ್ಯದರ್ಶಿ ಜ್ಯೋತಿ ತಿಪ್ಪೇಸ್ವಾಮಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಮ್ಯಾ, ಸಂಧ್ಯಾ, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಎಸ್.ಸಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಆಂಜನಪ್ಪ, ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಯುವ ಮೋರ್ಚಾ ಅಧ್ಯಕ್ಷ ಚೇತನ್, ಮುಖಂಡರಾದ ಬನಶಂಕರಿ ಬಾಬು, ಮಲ್ಲಿಕಾರ್ಜುನ್, ಬಿ.ಜಿ.ಕ,ಷ್ಣಪ್ಪ, ಸಿ.ಎನ್.ರಮೇಶ್, ಸತ್ಯತಮಂಗಲ ಜಗದೀಶ್, ದರ್ಶನ್, ಕೆ.ಪಿ.ಮಹೇಶ್, ಪ್ರೇಮ ಹೆಗಡೆ, ಆದ್ಯಾಗೌಡ, ಕೋಮಲಾ, ಡಾ.ಫರ್ಜಾನ ಬೇನಂ, ರೇಖಾಕುಮಾರ್, ವೆಂಕಟೇಶ್ ಆಚಾರ್, ಹನುಮಂತರಾಜು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
(Visited 1 times, 1 visits today)