ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿಗೆ ಸಂಬAಧಿಸಿದAತೆ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ವಯ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಬಹು ಉಪಯೋಗಿ ಸಭಾಂಗಣದಲ್ಲಿAದು ನಡೆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ದಾಖಲೆಗಳನ್ನು ಪರಿಶೀಲಿಸುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಪರಿಶೀಲನಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.
ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ ನಿಯೋಜಿತ ಪರಿಶೀಲನಾಧಿಕಾರಿಗಳು ನಿಗಧಿತ ನಮೂನೆಯ ಅಂಕಣಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ನಂತರ ಅಭ್ಯರ್ಥಿಗಳಿಂದ ಅಗತ್ಯ ದಾಖಲೆಗಳ 2 ಸೆಟ್ ದೃಢೀಕೃತ ನಕಲುಗಳನ್ನು ಪಡೆಯಬೇಕು ಎಂದು ಸೂಚಿಸಿದರು.
(Visited 1 times, 1 visits today)