ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು ಹಾಗೂ 88 ಇತರೆ ಸೇರಿದಂತೆ ಒಟ್ಟು 23,05,502 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಂಜೆ ಜರುಗಿದ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಚುನಾವಣಾ ಆಯೋಗ ಹೊರಡಿಸಿದ್ದ ವೇಳಾಪಟ್ಟಿಯಂತೆ 2024ರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರಿಗೆ 2024ರ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಕಾಲಾವಕಾಶ ನೀಡಲಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಅರ್ಹತಾ ದಿನಾಂಕ:1.1.2025ಕ್ಕನ್ವಯವಾಗುವAತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದರು. ಅಂತಿಮ ಮತದಾರರ ಪಟ್ಟಿಯನ್ನು ಜಾಲತಾಣ ಛಿeo.ಞಚಿಡಿಟಿಚಿಣಚಿಞಚಿ.gov.iಟಿ / ಣumಞuಡಿ.ಟಿiಛಿ.iಟಿ / ಜಿಲ್ಲೆಯ ಎಲ್ಲಾ 2627 ಮತಗಟ್ಟೆ/ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ನಿಗಧಿಪಡಿಸಲಾಗಿದ್ದ ಅವಧಿಯಲ್ಲಿ ನಮೂನೆ-6ರಲ್ಲಿ 11,264; ನಮೂನೆ-7ರಲ್ಲಿ 12,641 ಹಾಗೂ ನಮೂನೆ-8ರಲ್ಲಿ 13,162 ಸೇರಿ ಒಟ್ಟು 37,067 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಸ್ವೀಕೃತ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧ ಪ್ರತಿ ವರ್ಷ ನಿಗಧಿಪಡಿಸಲಾಗಿದ್ದ ಅರ್ಹತಾ ದಿನಾಂಕ ಜನವರಿ 1ನ್ನು ಪರಿಷ್ಕರಿಸಿ ಭಾರತ ಚುನಾವಣಾ ಆಯೋಗವು ಇನ್ನು ಮುಂದೆ ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವೆAದು ಪರಿಗಣಿಸಲು ನಿರ್ದೇಶನ ನೀಡಿದೆ. ಅದರಂತೆ ಪರಿಷ್ಕೃತ ದಿನಾಂಕಕ್ಕೆ 18 ವರ್ಷ ತುಂಬಲಿರುವವರು ನಮೂನೆ 6ರ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2615 ಮತಗಟ್ಟೆಗಳಿದ್ದು, ಮತಗಟ್ಟೆಗಳನ್ನು ರ‍್ಯಾಷನಲೈಸೇಷನ್ ಮಾಡಲಾಗಿದೆ. ರ‍್ಯಾಷನಲೈಸೇಷನ್ ನಂತರ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 12 ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಜಿಲ್ಲೆಯಲ್ಲಿ 2627 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಮಾನ್ಯತೆ ಪಡೆದ ವಿವಿಧ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಹಾಜರಿದ್ದರು.
(Visited 1 times, 1 visits today)