ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in \ https://ksouportal.com/reg_sc/StudyCentreRegistration.aspx ನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು *ಡೀನ್ (ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ರ ಜನವರಿ 18. ಮುಂದುವರಿದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಆನ್ ಲೈನ್ ಮುಖಾಂತರ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸAದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ . ಆರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
(Visited 1 times, 1 visits today)