ತುಮಕೂರು: ಸಿರಿಧಾನ್ಯ ಕುರಿತು ಜನಾಂದೋಲನ ರೂಪದಲ್ಲಿ ಪ್ರಚಾರ ಕೈಗೊಂಡು ರಾಜ್ಯವನ್ನು ಸಿರಿಧಾನ್ಯಗಳಿಗೆ ಜಾಗತಿಕ ಕೇಂದ್ರವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2 ದಿನಗಳ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಒನಕೆಯಲ್ಲಿ ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯಗಳು ಹೆಚ್ಚಿನ ರೋಗ ನಿರೋಧಕ ಶಕ್ತಿಯೊಂದಿಗೆ ಹೇರಳವಾದ ಪೋಷಕಾಂಶಗಳನ್ನು ಹೊಂದಿವೆ. ಸಿರಿಧಾನ್ಯ ಸೇವನೆಯಿಂದ ಆರೋಗ್ಯವರ್ಧನೆಯಾಗುವುದಲ್ಲದೆ ರೋಗ ಮುಕ್ತರಾಗಿ ಆಸ್ಪತ್ರೆಯಿಂದ ದೂರವಿರಬಹುದು ಎಂದು ತಿಳಿಸಿದರು.
ತಾಯಂದಿರು ತಮ್ಮ ಮಕ್ಕಳಿಗೆ ಸಿರಿಧಾನ್ಯ ಪದಾರ್ಥಗಳ ಸೇವನೆಯ ಅಭ್ಯಾಸ ಮಾಡಿಸಬೇಕು. ನಿಧಾನವಾಗಿ ಜೀರ್ಣವಾಗಿ ದೇಹಕ್ಕೆ ಶಕ್ತಿವರ್ಧಕವಾಗಿ ಕೆಲಸ ಮಾಡುವ ಗುಣಧರ್ಮವನ್ನು ಹೊಂದಿರುವ ಸಿರಿಧಾನ್ಯಗಳನ್ನು ಜನರು ಹೆಚ್ಚಾಗಿ ಬಳಸಬೇಕು ಎಂದರಲ್ಲದೆ, ಜಿಲ್ಲೆಯು ಸಿರಿಧಾನ್ಯಗಳ ತವರೂರು ಎಂದೆನೆಸಿಕೊAಡಿದೆ. ಜಿಲ್ಲೆಯ ಸುಮಾರು 1400 ಹೆಕ್ಟೇರ್ ಪ್ರದೇಶದಲ್ಲಿ ಸಾಮೆ, ನವಣೆ, ಕೊರಲೆ, ಹಾರಕ, ಸಜ್ಜೆಯಂತಹ ಸಿರಿಧಾನ್ಯಗಳನ್ನು ಬೆಳೆದು ಅಂದಾಜು 4.95 ಲಕ್ಷ ಟನ್ ಸಿರಿಧಾನ್ಯವನ್ನು ಉತ್ಪಾದಿಸಲಾಗುತ್ತಿದೆ. ಸಿರಿಧಾನ್ಯ ಬೆಳೆಯ ವಿಸ್ತೀರ್ಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಮಾರ್ಗದರ್ಶನದೊಂದಿಗೆ ಉತ್ತೇಜನ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಸಿರಿಧಾನ ಉತ್ಪಾದಕರು, ಉಪಸ್ಥಿತರಿದ್ದರು.
(Visited 1 times, 1 visits today)