ತುಮಕೂರು: ನವಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಮಹಾರಾಜ್ ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟಿçÃಯ ಯುವದಿನಾಚರಣೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು. ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು. ಶಿಕ್ಷಣ ತಜ್ಞರಾದ ಕೆ. ಆರ್. ಪದ್ಮಿನಿ ಮಾತನಾಡಿ ಸ್ವಾಮಿ ವಿವೇಕಾನಂದರು ಪರೀಕ್ಷಿಸದೆ ಯಾವುದನ್ನೂ ಒಪ್ಪಿಕೊಳ್ಳುತ್ತಿರಲಿಲ್ಲ. ಏಕಾಗ್ರತೆ ಎಂಬುದು ಜೀವನದ ಮುಖ್ಯ ಘಟಕ ಎಂದರು. ಶಕ್ತಿಯು ನಮ್ಮೊಳಗೆ ಇದೆ ನಾವು ಏನು ಬೇಕಾದರೂ ಸಾಧಿಸಬಹುದು. ಶಕ್ತಿಯ ಗಣಿಗಳಾಗಿ ಒಳ್ಳೆಯ ವಿಚಾರಗಳಿಗೆ ಕಿವಿ ಕೊಡಿ ಆತ್ಮವಿಶ್ವಾಸದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿವಿಯ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ವಿವೇಕಾನಂದರು ತಮ್ಮ ಸ್ವಾರ್ಥದ ಬಗ್ಗೆ ಚಿಂತಿಸಿರಲಿಲ್ಲ. ಸದಾ ದೇಶದ ಶಕ್ತಿಯನ್ನು ಪ್ರೇರೇಪಿಸಿದರು. ನಾವು ನಮ್ಮ ಶಕ್ತಿಯನ್ನು ದೇಶಕ್ಕೆ ಹೇಗೆ ಹಂಚಿಕೆ ಮಾಡಬೇಕು ಎಂದು ತಿಳಿಸಿ ಕೊಟ್ಟವರು ಅವರು. ಅಸಾಧಾರಣ ವಿಚಾರಗಳನ್ನು ಚಿಂತಿಸುವ ವ್ಯಕ್ತಿ ಮಹಾಪುರುಷನಾಗುತ್ತಾನೆ. ಯುವಜನತೆ ಅಂತರAಗದ ಶಕ್ತಿಯನ್ನು ಹೆಚ್ಚಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಬೇಕು ಎಂದರು. ತುಮಕೂರು ವಿವಿಯ ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ ಕರಿಯಣ್ಣ., ವಿವೇಕಾನಂದ ಅಧ್ಯಯನ ಪೀಠ ಸಂಯೋಜಕರಾದ ಡಾ. ಚೇತನ್ ಪ್ರತಾಪ್ ಕೆ.ಎನ್. ಉಪಸ್ಥಿತರಿದ್ದರು.
(Visited 1 times, 1 visits today)