ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ನೀರಗುಂದ ಗ್ರಾಮದ ಸಂಪರ್ಕ ರಸ್ತೆಗೆ ಸೇತುವೆ ಮತ್ತು ರಸ್ತೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನೀರಗುಂದ, ಅಜ್ಜೇನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್. ಅಲ್ಲಪ್ಪ ಮಾತನಾಡಿ ಗ್ರಾಮದಲ್ಲಿರುವ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಹತ್ತಾರು ವರ್ಷಗಳಿಂದ ಈ ರಸ್ತೆಯನ್ನು ದುರಸ್ಥಿ ಪಡಿಸಿ, ಸೇತುವೆ ನಿರ್ಮಾಣ ಮಾಡಿ ಎಂದು ಸಾಕಷ್ಟು ಬಾರಿ ಶಾಸಕರಿಗೂ, ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜವಿಲ್ಲದಾಗಿದೆ. ಜನರು ಓಡಾಡಲೂ ಕಷ್ಟವಾಗುತ್ತಿದೆ. ರಸ್ತೆ ತುಂಬಾ ನೀರು ನಿಂತಿರುತ್ತದೆ. ಗುಂಡಿಗಳು ತುಂಬಿವೆ. ಮಳೆಗಾಲದಲ್ಲಂತೂ ಇಲ್ಲಿ ಓಡಾಡುವುದು ಕಷ್ಟಕರ. ಮುನ್ನೂರು ಮೀಟರ್ ದೂರ ಕ್ರಮಿಸುವ ರಸ್ತೆ ಸರಿಯಿಲ್ಲದ ಕಾರಣ ಬಳಸಿಕೊಂಡು ಸುಮಾರು ಐದು ಕಿಮೀ ದೂರ ಹೋಗಬೇಕಿದೆ. ಎಂದು ತಿಳಿಸಿದರು. ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡದಿದ್ದಲ್ಲಿ ತುರುವೇಕೆರೆಯಿಂದ ಕೆಬಿ ಕ್ರಾಸ್ ಕಡೆ ತೆರಳುವ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಅಲ್ಲಪ್ಪ, ಸೇರಿದಂತೆ ಹಲವಾರು ಮಂದಿ ಇದ್ದರು.
(Visited 1 times, 1 visits today)