ತುಮಕೂರು : ಅಭಿವೃದ್ಧಿಯ ಹೆಸರಿನಲ್ಲಿ ಜಿಲ್ಲೆಯ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಗೋಮಾಳ ಮತ್ತು ಅರಣ್ಯ ಭೂಮಿಯನ್ನು ಗ್ರಾಮ ಪಂಚಾಯಿತಿಗಳ ಪಿಡಿಒಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಹಾಗೂ ತಾಲ್ಲೂಕಿನ ಆಡಳಿತ ಸರ್ವನಾಶಕ್ಕೆ ಮುಂದಾಗಿದ್ದು, ವಿದ್ಯುತ್ ಸರಬರಾಜು ಕಂಪನಿಯ ವಿವಿಧ ಯೋಜನೆಗೆ ಜಿಲ್ಲೆಯ ಗೋಮಾಳಗಳಲ್ಲಿರುವ ಸಾವಿರಾರು ಮರಗಳನ್ನು ಮಾರಣ ಹೋಮ ನಡೆಸಲು ಮುಂದಾಗಿದ್ದು, ಇದನ್ನು ಕೂಡಲೇ ಕೈ ಬಿಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನಸಿಂಧುಸ್ವಾಮಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿದ್ಯುತ್ ಸರಬರಾಜು ಕಂಪನಿಯು ಜಿಲ್ಲೆಯ ವಿವಿಧ ತಾಲಕು ವ್ಯಾಪ್ತಿಯಲ್ಲಿ ಸೌರ ಶಕ್ತಿ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಿದ್ದು, ಅದಕ್ಕಾಗಿ ಅಗತ್ಯವಾಗಿ ಬೇಕಿರುವ ಸಾವಿರಾರು ಎಕರೆ ಭೂಮಿಯನ್ನು ಸ್ಥಳೀಯ ಆಡಳಿತಗಳಿಂದ ಪಡೆಯಲು ಮುಂದಾಗಿದೆ. ಅಲ್ಲದೇ ಗೋಮಾಳಗಳನ್ನೇ ಗುರಿ ಮಾಡಿಕೊಂಡಿರುವ ವಿದ್ಯುತ್ ಕಂಪನಿ ಗೋಮಾಳ ಜಾಗದಲ್ಲಿರುವ ನೂರಾರು ವರ್ಷಗಳ ಸಾವಿರಾರು ಮರಳನ್ನು ತೆರವು ಮಾಡಿ ಆ ಜಾಗದಲ್ಲಿ ಸೌರಪ್ಲೇಟ್ ಗಳನ್ನು ಅಳವಡಿಸಲು ಈಗಾಗಲೇ ರೂಪುರೇಷೆಗಳನ್ನು ಸಿದ್ಧಗೊಳಿಸುತ್ತಿದೆ. ಇದಕ್ಕಾಗಿ ಸ್ಥಳೀಯ ಪಂಚಾಯಿತಿ ಮತ್ತು ಅರಣ್ಯ ಇಲಾಖೆಗೆ ಈಗಾಗಲೇ ವಿದ್ಯುತ್ ಪ್ರಸರಣ ನಿಗಮದಿಂದ ಗೋಮಾಳದಲ್ಲಿರುವ ಮರಗಳ ತೆರವಿಗೆ ಒಪ್ಪಿಗೆ ನೀಡುವಂತೆ ಮನವಿ ಪತ್ರಗಳನ್ನೂ ನೀಡಿದ್ದು, ಅದಕ್ಕೆ ಸ್ಥಳೀಯ ಆಡಳಿತಗಳೂ ಸಹ ಸೈ ಎಂದಿದ್ದು, ಇಲ್ಲೆಯ ಜನರ ನಿದ್ದೆಗೆಡಿಸಿದೆ ಎಂದು ಅಸಮಾಧಾನ ಹೊರ ಹಾಕಿದರು. ಇದು ಕೂಡಲೇ ನಿಲ್ಲಬೇಕು ಎಂದು ಒತ್ತಾಯಿಸಿದರು.
(Visited 1 times, 1 visits today)