ತುಮಕೂರು: ಇತ್ತೀಚೆಗೆ ವಿಜಯಪುರ ಜಿಲ್ಲೆಯ ಗಾಂಧಿನಗರದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕರ ಮೇಲೆ ಆದಂತಹ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಇಂದು ತುಮಕೂರು ಜಿಲ್ಲೆಯ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ತಮ್ಮ ಮನವಿ ಪತ್ರದಲ್ಲಿ ಪರಿಶಿಷ್ಟ ಜಾತಿ ಕೂಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೇ ಜಾತಿನಿಂದನೆಯ ಮಾಡಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ವಹಿಸುವುದಲ್ಲದೇ ಹಲ್ಲೆಗೊಳಗಾದ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ನೆರವನ್ನು ನೀಡುವುದರೊಂದಿಗೆ ಕೂಲಿ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ, ಪರಿಹಾರ, ಮೂಲಭೂತ ಸೌಕರ್ಯಗಳು ಹಾಗೂ ಸೂಕ್ತ ರಕ್ಷಣೆ ಕೊಡುವಂತೆ ನಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದೇವೆಂದು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ತಿಳಿಸಿದ್ದಾರೆ. ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಅಧ್ಯಕ್ಷರು ಎನ್.ಕೆ.ನಿಧಿಕುಮಾರ್, ತುಮಕೂರು ಜಿಲ್ಲಾ ಅಟ್ರಾಸಿಟಿ ಕಮಿಟಿಯ ಸಮಿತಿಯ ಸದಸ್ಯರುಗಳಾದ ಕೆ ಗೋವಿಂದರಾಜ್, ಎ.ರಂಜನ್, ಕೋರಾ ರಾಜಣ್ಣ, ಉಪಾಧ್ಯಕ್ಷ ಲಕ್ಷಿ÷್ಮನಾರಾಯಣ ಉಪಸ್ಥಿರಿದ್ದರು.

(Visited 1 times, 1 visits today)