ಪಾವಗಡ: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸೆಂಟ್ರಿAಗ್ ಕೆಲಸಕ್ಕೆ ತೆರಳಿ, ಮರಳಿ ತಮ್ಮ ಊರಿಗೆ ಬರುತ್ತಿದ್ದಂತಹ ಸಂದರ್ಭದಲ್ಲಿ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಬಗುಡೂರು ಗ್ರಾಮದ ತಿರುವಿನ ಬಳಿ, 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬೀಕರ ಅಪಘಾತ ಸಂಭವಿಸಿದ್ದು ಹತ್ತಕ್ಕೂ ಅಧಿಕ ಜನ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ. ಎಚ್ ಹೊಸಳ್ಳಿ ತಾಂಡ ಗ್ರಾಮದ ಲಂಬಾಣಿ ಸಮುದಾಯದ ಪುರುಷ ಹಾಗೂ ಮಹಿಳಾ ಕಾರ್ಮಿಕರು ಸೆಂಟ್ರಿAಗ್ ಕೆಲಸಕ್ಕೆಂದು ತಿರುಮಣಿ ಭಾಗಕ್ಕೆ ಶುಕ್ರವಾರ ತೆರಳಿದ್ದರು,ಕೆಲಸವನ್ನು ಮುಗಿಸಿ ಮರಳಿ ತಮ್ಮ ಗ್ರಾಮಕ್ಕೆ ಬರುವಂತಹ ಸಂದರ್ಭದಲ್ಲಿ ಬುಗುಡೂರು ಸಮೀಪ ವಾಹನ ನಿಯಂತ್ರಣ ತಪ್ಪಿ ಪಟ್ಟಿಯಾಗಿದೆ ಘಟನೆಯಲ್ಲಿ 55 ವರ್ಷದ ತಿಪ್ಪ ನಾಯಕ್ ಎನ್ನುವವರ ಒಂದು ಕೈ ಸಂಪೂರ್ಣ ನಜ್ಜುಗುಜ್ಜಾಗಿದ್ದು ಲಕ್ಷಮ್ಮ, ಅರುಣಾ, ಕಾವೇರಿ, ಶಾಂತಮ್ಮ, ಶಾಂತಾಬಾಯಿ,ಪ್ರಕಾಶ್, ದೇವಿ ಬಾಯಿ, ಸಕ್ಕಬಾಯಿ ಎನ್ನುವವರಿಗೆ ತಲೆ ಹಾಗೂ ಸೊಂಟ ಇತರೆ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು ಇವರನ್ನ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರಾತ್ರಿಯ 10 ಗಂಟೆಯ ಸಂದರ್ಭದಲ್ಲಿ ರವಾನಿಸಲಾಗಿದೆ.
ಆಂಬುಲೆನ್ಸ್ ಮೂಲಕ ಗಾಯಲುಗಳನ್ನ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯಾಧಿಕಾರಿ ಡಾ. ಎ ಎಸ್ ಎಲ್ ಬಾಬು, ಡಾ, ರಾಜೇಶ್ ಡಾ, ಆಶಿಕ ಗೌಡ, ಕಲ್ಲೇಶ್ ಮತ್ತು ಇತರರ ತಂಡ ಗಾಯಲುಗಳನ್ನು ಉಪಚರಿಸಿ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ಕಳಿಸಿದ್ದಾರೆ.
ಸ್ಥಳಕ್ಕೆ ಪಾವಗಡ ವೃತ್ತ ನಿರೀಕ್ಷಕ ಸುರೇಶ್ ಗ್ರಾಮಾಂತರ ವೃತ್ತ ನಿರೀಕ್ಷಕ ಸುರೇಶ ಗಿರೀಶ್ ಭೇಟಿ ನೀಡಿ ಪರಿಶೀಲಿಸಿದ್ದು ಆರೋಗ್ಯವನ್ನು ವಿಚಾರಿಸಿದ್ದಾರೆ. ಘಟನೆ ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
(Visited 1 times, 1 visits today)