ತುಮಕೂರು: ಸವಿತಾ ಸಮಾಜದ ಯುವಜನತೆ ಶೈಕ್ಷಣಿಕವಾಗಿ, ಅರ್ಥಿಕವಾಗಿ ಮುಂದೆ ಬರಲು ಅಗತ್ಯವಾದ ಮಾರ್ಗದರ್ಶವನ್ನು ಸಮಾಜದ ಹಿರಿಯರು ನೀಡುವ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಸಲಹೆ ನೀಡಿದ್ದಾರೆ.
ನಗರದ ಕನ್ನಡಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಸಾಪ,ಸವಿತಾ ಸಮಾಜ,(ರಿ), ತುಮಕೂರು ತಾಲೂಕು ಮತ್ತು ನಗರ ಸವಿತಾ ಸಮಾಜದ ವತಿಯಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ದೀಪಬೆಳಗಿ , ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತಿದ್ದ ಅವರು,ದುಡಿಯುವ ಕೈಗಳಿಗೆ ಕೆಲಸ ನಿಟ್ಟಿನಲ್ಲಿ ಸರಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಶೈಕ್ಷಣಿಕವಾಗಿ, ಅರ್ಥಿಕವಾಗಿ ಹೇಗೆ ಸವಿತಾ ಸಮಾಜದ ಸದೃಢವಾಗಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸಿ, ಅವರು ಸಹ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ತಾವೆಲ್ಲರೂ ಸಹಕಾರ ನೀಡಬೇಕೆಂದರು.
ಯಾವುದೇ ಸಮಾಜ ಅಭಿವೃದ್ದಿಯಾಗಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ನಿಮ್ಮಲ್ಲಿ ಸಂಘಟನೆ ಎಂಬುದು ಇದ್ದರೆ, ರಾಜಕಾರಣಿಗಳು, ಅಧಿಕಾರಿಗಳು ಎಲ್ಲರೂ ನಿಮ್ಮನ್ನು ಹುಡುಕಿಕೊಂಡು ಬರುತ್ತಾರೆ ಎಂದರು. ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್ ಕು.ಮಿರ್ಜಿ,ಸುರೇಶಕುಮಾರ್,ಜಿಲ್ಲಾ ಸವಿತಾ ಸಮಾಜದ ಕೆ.ವಿ.ನಾರಾಯಣ್,ಪದಾಧಿಕಾರಿಗಳಾದ ಸುರೇಶ್.ಎಸ್.,ಗಂಗಾಧರ್.ಬಿ., ಪಾರ್ಥಸಾರಥಿ. ಉಪಸ್ಥಿತರಿದ್ದರು.

(Visited 1 times, 1 visits today)