ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಾಥಮಿಕ ಶಿಕ್ಷಣದ ಬುನಾದಿ ಬಹುಮುಖ್ಯವಾಗಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಭಾಷೆ, ಬರವಣಿಗೆ, ಕೌಶಲ್ಯತೆ, ಸಾಮಾನ್ಯ ಜ್ಞಾನವನ್ನು ಈ ಹಂತದಲ್ಲೇ ಪಡೆದುಕೊಂಡಲ್ಲಿ ಯಶಸ್ಸನ್ನು ಸುಲಭವಾಗಿ ಪಡೆಯಬಹುದೆಂದು ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ರವೀಂದ್ರ.ಪಿ.ಎನ್. ಹೇಳಿದರು.
ಅವರು ಫೆಬ್ರವರಿ 8ರಂದು ಗುಬ್ಬಿ ತಾಲ್ಲೂಕಿನ ಕಾಡಶೆಟ್ಟಿಹಳ್ಳಿ ಜ್ಞಾನಮಲ್ಲಿಕಾ-ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ‘ಮಕ್ಕಳೊಡನೆ ಮಾತು ಕತೆ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಗ್ರಾಮೀಣ ಭಾಗದ ವಿದ್ಯಾಥಿಗಳಲ್ಲಿ ಬದ್ಧತೆ, ಕೌಶಲ್ಯ, ವ್ಯವಹಾರಿಕ ಜ್ಞಾನ, ಹಿರಿ-ಕಿರಿಯರಿಗೆ ಗೌರವ ಕೊಡುವುದನ್ನು ಕಲಿಸುವುದು ಗ್ರಾಮೀಣ ಪ್ರದೇಶದ ಪಾಠ ಶಾಲೆಗಳೆಂದರೆ ಹಳ್ಳಿಗಳು, ಪ್ರಾಥಮಿಕ ಹಂತದ ಶಿಕ್ಷಣದ ಬೂನಾದಿ ಬಹುಮುಖ್ಯವಾದದ್ದು, ಪ್ರಾಥಮಿಕ ಶಿಕ್ಷಣದ ಬೂನಾದಿ ಬಿಗಿಯಾಗಿದ್ದರೆ ಜ್ಞಾನದ ಸೌಧಗಳನ್ನು ಸುಲಭವಾಗಿ ಕಟ್ಟಬಹುದು ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮೈಸೂರು ಒಡೆಯರಾಗಿದ್ದ ನಾಲ್ವಡಿ ಕೃಷ್ಣರಾಜೇಂದ್ರ ಅವರು ಸಮ ಸಮಾಜದ ಕನಸ್ಸನ್ನು ಕಂಡವರು, ಒಬ್ಬರು ಸಂವಿಧಾನ ನೀಡಿದರೆ, ಮತ್ತೊಬ್ಬರು ಆಗಿನ ಕಾಲಕ್ಕೆ ಮೀಸಲಾತಿಯ ಮೂಲಕ ಶಿಕ್ಷಣ ನೀಡಿದಂತಹ ಮಹಾನುಭಾವರು. ಎಂದು ಹೇಳಿದರು.
ಸಮಾರಂಭದಲ್ಲಿ ಪ್ರಾಸ್ತವಿಕವಾಗಿ ಪತ್ರಕರ್ತ ವೆಂಕಟಾಚಲ.ಹೆಚ್.ವಿ. ಮಾತನಾಡಿದರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್, ಮುಖ್ಯೋಪಾಧ್ಯಾಯರಾದ ಗಂಗಾಧರ, ವಕೀಲರಾದ ಕೆ.ಎಸ್.ರಾಘವೇಂದ್ರ ಉಪಸ್ಥಿತರಿದ್ದರು.
(Visited 1 times, 1 visits today)