ಕೊರಟಗೆರೆ: ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಉಪಾಧ್ಯಕ್ಷರಾಗಿ ಚಂದ್ರಪ್ಪ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಿಡಿಒ ಗುರುರಾಜ್ ಘೋಷಣೆ ಮಾಡಿದರು.
ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏರ್ಪಡಿಸಲಾಗಿದ್ದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಊರಿನ ಮುಖಂಡರು ಹಾಗೂ ನಿರ್ದೇಶಕರ ಒಮ್ಮತದಿಂದ ಅಧ್ಯಕ್ಷ ಸ್ಥಾನಕ್ಕೆ ಮಧೂಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದರು. ಇವರ ವಿರುದ್ದ ಯಾರು ನಾಮಪತ್ರ ಸಲ್ಲಿಸದ ಹಿನ್ನಲೇಯಲ್ಲಿ ಅಧ್ಯಕ್ಷರಾಗಿ ಮಧುಕುಮಾರ್ ಉಪಾಧ್ಯಕ್ಷರಾಗಿ ಚಂದ್ರಪ್ಪ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನೂತನ ಅಧ್ಯಕ್ಷ ಮಧುಕುಮಾರ್ ಮಾತನಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಆಶೀರ್ವಾದದಿಂದ ಹಾಗೂ ಎಲ್ಲಾ ನನ್ನ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಗ್ರಾಮೀಣ ಭಾಗದ ರೈತ ಸಮಸ್ಯೆಯನ್ನ ಹಾಗೂ ಸಾಲ ಸೌಲಭ್ಯಗಳನ್ನ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್ ರಾಜಣ್ಣ ನವರ ಸಹಕಾರ ಪಡೆದು ಬಡವರಿಗೆ ಹಾಗೂ ರೈತರಿಗೆ ಸಾಲ ಸೌಲಭ್ಯ ಸೇರಿದಂತೆ ಇತರೆ ಸರ್ಕಾರದ ಸವಲತ್ತುಗಳನ್ನ ನೀಡಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು, ನಾನು ಅಧ್ಯಕ್ಷನಾಗಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನ ತಿಳಿಸಿದರು.
ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಹನುಮಾನ್ ಮಾತನಾಡಿ ಈ ಪ್ರಾಥಮಿಕ ಕೃಷಿ ಪತ್ತಿ ಸಹಕಾರ ಸಂಘ ಮೊದಲು ಆರ್ಥಿಕ ವ್ಯವಸ್ಥೆಯಲ್ಲಿ ಕುಂಟಿತವಾಗಿತ್ತು. ಇಂತಹ ಸಹಕಾರ ಸಂಘವನ್ನ ಪ್ರೋತ್ಸಹಿಸಲು ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣನವರು ಸಾಕಷ್ಟು ಸಾಲ ಸೌಲಭ್ಯವನ್ನ ನೀಡಿದ ಪರಿಣಾಮ ಇವತ್ತು ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ಇದೆ. ಇಲ್ಲಿನ ರೈತರಿಗೆ ಸುಮಾರು 5 ಕೋಟಿ ಸಾಲವನ್ನ ನೀಡಲಾಗಿದೆ ಎಂದು ತಿಳಿಸಿದರು. ಇದೆ ಸಂದರ್ಭದಲ್ಲಿ ಕೊರಟಗೆರೆ ಡಿಸಿಸಿ ಬ್ಯಾಂಕ್ ಮೇಲ್ವಾಚರಕರಾದ ಬೋರಣ್ಣ ಕಾರ್ಯನಿರ್ವಾಹಣಾಧಿಕಾರಿ ರಾಘವೇಂದ್ರ, ನಿರ್ದೇಶಕರಾದ ಅಪ್ಪಾಜಪ್ಪ, ರಮೇಶ್, ಮಲ್ಲೇಶಯ್ಯ, ಚಿಕ್ಕರಂಗಯ್ಯ, ಉಮೇಶ್, ವೇದಾಂಬ, ಸೌಭಾಗ್ಯಮ್ಮ, ಹೊಸಳಪ್ಪ, ರಾಮಸ್ವಾಮಿ, ರಾಜಶೇಖರ್ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರಯ್ಯ ಮುಖಂಡರಾದ ಮಾವತ್ತೂರು ಮಂಜುನಾಥ್, ನಾಗರಾಜು, ಕಾಮಣ್ಣ, ಸೇರಿದಂತೆ ಇತರರು ಇದ್ದರು.
(Visited 1 times, 1 visits today)