ತುಮಕೂರು: ಸಿದ್ದಗಂಗೆಯ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ದೂರದೃಷ್ಟಿಯ ಫಲವಾದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ, ರೈತರಿಗೆ, ಕೈಗಾರಿಕೋದ್ಯಮಿಗಳಿಗೆ ಮಾಹಿತಿ ಒದಗಿಸುವ ಒಂದು ವೇದಿಕೆಯಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.
ಸಿದ್ದಗಂಗಾ ಮಠದವತಿಯಿಂದ ನಡೆಯುವ ಶ್ರೀಸಿದ್ದಲಿಂಗೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು 61 ವರ್ಷಗಳ ಹಿಂದೆ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಶ್ರೀಮಠಕ್ಕೆ ಬರುವ ಭಕ್ತರಿಗೆ ಧಾರ್ಮಿಕ ಉತ್ಸವ, ಆಚರಣೆಗಳ ಜೊತೆಗೆ, ಕೃಷಿ ಮತ್ತು ಕೃಷಿಗೆ ಪೂರಕವಾದ ಅಂಶಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ವಸ್ತುಪ್ರದರ್ಶನವನ್ನು ಆಯೋಜಿಸಿದ್ದು, ಶ್ರೀಸಿದ್ದಲಿಂಗಸ್ವಾಮೀಜಿಗಳು ಅದನ್ನು ಮುಂದುವರೆಸಿಕೊAಡು ಬರುತಿದ್ದಾರೆ ಎಂದರು.
ಸಿದ್ದಗAಗಾ ಮಠದ ಭಕ್ತರು, ಇಲ್ಲಿಗೆ ಬರುವ ರೈತರು, ಉದ್ಯಮಿದಾರರಿಗೆ ದೇಶದಲ್ಲಿ ನಡೆಯುವ ಹೊಸ ಅವಿಷ್ಕಾರದ ಬಗ್ಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಆರಂಭಿಸಿದ ವಸ್ತು ಪ್ರದರ್ಶನವನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ಯಾವುದೇ ರೀತಿಯ ಲೋಪದೋಷಗಳು ಬರದಂತೆ ಹಲವಾರು ವರ್ಷಗಳಿಂದ ಸುಸೂತ್ರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷ ಹೊಸತನವನ್ನು ಈ ವಸ್ತುಪ್ರದರ್ಶನದಲ್ಲಿ ಕಾಣಬಹುದು. ಇದರಿಂದ ಶ್ರೀಶಿವಕುಮಾರಸ್ವಾಮೀಜಿಗಳ ಆಶಯ ಈಡೇರಿದಂತಾಗಿದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ನುಡಿದರು.
ಕೃಷಿ ನಮ್ಮ ದೇಶದ ಬೆನ್ನೆಲುಬು. ಹಾಗಾಗಿ ಕೃಷಿಕರಿಗೆ ಈ ಕ್ಷೇತ್ರದಲ್ಲಿನ ಹೊಸ ಬೆಳವಣಿಗೆಗಳ ಮಾಹಿತಿ ನೀಡುವುದು, ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಅಗತ್ಯ ಮಾಹಿತಿ ನೀಡುವುದರ ಜೊತೆಗೆ, ಸರಕಾರದ ವಿವಿಧ ಇಲಾಖೆಗಳ ಮೂಲಕ ಸರಕಾರದ ಸವಲತ್ತುಗಳನ್ನು ಜನರು ಹೇಗೆ ಪಡೆದುಕೊಳ್ಳಬೇಕು. ಇಂದಿನಿAದ 15 ದಿನಗಳ ಕಾಲ ನಡೆಯುವ ಈ ವಸ್ತುಪ್ರದರ್ಶನದ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು ಎಂದು ಶ್ರೀಶ್ರೀ ಸಿದ್ದಲಿಂಗಸ್ವಾಮೀಜಿ ಮನವಿ ಮಾಡಿದರು. ವೇದಿಕೆಯಲ್ಲಿ ಉದ್ಯಮಿಗಳಾದ ಮಲ್ಲಿಕಾರ್ಜುನ್, ಶೇಖರ್, ಶ್ರೀನಿವಾಸ್, ರಾಜಶೇಖರ್, ವಿಶ್ವಣ್ಣ, ಇದ್ದರು.
(Visited 1 times, 1 visits today)